Wednesday, September 3, 2025
HomeUncategorizedನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಪ್ರಧಾನಿ ಮೋದಿ

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ದ್ರೌಪದಿ ಮುರ್ಮು ಅವರು ನೂತನ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಪ್ರಧಾನಿ ಮೋದಿ ಅವರು ಈ ಭೇಟಿ ಕುರಿತು ರಾಷ್ಟ್ರಪತಿ ಭವನ ಟ್ವೀಟ್‌ ಮಾಡಿದ್ದಾರೆ.

ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ಆಗಿರುವ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ್ದ ಮುರ್ಮು ಅವರು, ರಾಷ್ಟ್ರಪತಿ ಹುದ್ದೆಗೆ ಏರಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಭಾರತದ ಎಲ್ಲ ಬಡವರ ಸಾಧನೆಯಾಗಿದೆ. ಈ ಹುದ್ದೆಗೆ ನನ್ನ ಹೆಸರನ್ನು ಘೋಷಿಸಿದ್ದು, ದೇಶದಲ್ಲಿ ಬಡವರು ಕನಸನ್ನು ಕಾಣುವುದಷ್ಟೇ ಅಲ್ಲ. ಅದನ್ನು ಸಾಕಾರಗೊಳಿಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು.

RELATED ARTICLES
- Advertisment -
Google search engine

Most Popular

Recent Comments