Tuesday, September 2, 2025
HomeUncategorizedಪ್ರವೀಣ್​​​ ಹತ್ಯೆ: ತಕ್ಷಣ ಕೊಲೆಗಡುಕರನ್ನು ಬಂಧಿಸಿ; ಸಿದ್ದರಾಮಯ್ಯ ಆಗ್ರಹ

ಪ್ರವೀಣ್​​​ ಹತ್ಯೆ: ತಕ್ಷಣ ಕೊಲೆಗಡುಕರನ್ನು ಬಂಧಿಸಿ; ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.

ಹತ್ಯೆ ಕುರಿತು ಟ್ವೀಟ್ ಮಾಡಿರುವ ಅವರು, ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (32) ಅವರನ್ನು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿದೆ.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿ ಆಗಿದೆ. ಗಂಭೀರ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದರು.

ಪ್ರವೀಣ್ ಅವರು, ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಬಜರಂಗದಳವೂ ಸೇರಿದಂತೆ ಸಂಘ ಪರಿವಾರದ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು.

RELATED ARTICLES
- Advertisment -
Google search engine

Most Popular

Recent Comments