Monday, August 25, 2025
Google search engine
HomeUncategorizedಇದು ಒಪ್ಪಿಕೊಳ್ಳುವಂತ ವಿಚಾರ ಅಲ್ಲ: ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಇದು ಒಪ್ಪಿಕೊಳ್ಳುವಂತ ವಿಚಾರ ಅಲ್ಲ: ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಬೆಂಗಳೂರು: ಗೃಹ ಸಚಿವರ ಮನೆ ಬಳಿ ABVP ಕಾರ್ಯಕರ್ತರು ಪ್ರತಿಭಟನೆ ನಡೆಸಿದ ವಿಚಾರಕ್ಕೆ ಇದು ಒಪ್ಪಿಕೊಳ್ಳುವಂತ ವಿಚಾರ ಅಲ್ಲ. ಈ ಬಗ್ಗೆ ಮೊದಲೇ ಮುನ್ಸೂಚನೆ ಅರಿತು ಕೊಳ್ಳಬೇಕಿತ್ತು, ಅದು ನಮ್ಮಿಂದ ಆಗಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು ನಮ್ಮ ಡಿಸಿಪಿ, ಹೆಚ್ಚುವರಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೃಹ ಸಚಿವರಿಗೆ ಮನವಿ ಪತ್ರ ಕೊಟ್ಟು, ಮೌನ ಪ್ರತಿಭಟನೆ ಮಾಡ್ತಿವಿ ಅಂತ ಹೇಳಿದ್ರು. ಆದರೆ ಸ್ಥಳದಲ್ಲಿ ರೆಸಿಡೆನ್ಸಿಷಿಯಲ್ ಗಾರ್ಡ್ ಸಹ ಇದ್ರು.
ಮೊದಲು ಮೌನವಾಗಿ ಪ್ರತಿಭಟನೆ ಮಾಡ್ತಿದ್ರು. ನಂತರ ಅಲ್ಲಿದ್ದ ಸಿಬ್ಬಂದಿ ಗೇಟ್ ಮುಚ್ಚಿದ್ದಾರೆ.

ಬಳಿಕ ಗೇಟ್ ತಳ್ಳಿಕೊಂಡು ಒಳ ನುಗ್ಗಲು ಪ್ರಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮ ಪೊಲೀಸರು ಅವರನ್ನು ಹಿಡಿದುಕೊಂಡು, ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ರು. ಅಧಿಕಾರಿಗಳ ತಪ್ಪು ಕಂಡು ಬಂದರೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಗೃಹ ಸಚಿವರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular

Recent Comments