ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ : ಬೆಳಗ್ಗೆ ಗದ್ದೆ ಕೆಲಸಕ್ಕೆ ಹೋಗುವಾಗ ಏಕಾಏಕಿ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ‌ ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ನಡೆದಿದೆ.

ನಗರದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ದಾಳಿಯಾಗಿದ್ದು, ಕೆಂಪಣ್ಣ (50) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾದ್ದರಿಂದ ಬೆಳಗ್ಗೆ ಗದ್ದೆ ಕೆಲಸಕ್ಕೆ ಹೋಗುವಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳಿಯರ ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು, ಅರಣ್ಯ ಸಚಿವ ಸ್ಥಳಕ್ಕೆ ಬರುವಂತೆ ಸ್ಥಳಿಯರು ಪಟ್ಟು ಹಿಡಿದಿದ್ದು, ಆರು ತಿಂಗಳ‌ ಅಂತರದಲ್ಲಿ ಕಾಡಾನೆಗಳು ಐದನೇ ಬಲಿ ಪಡೆದಿದೆ. ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳಿಯರ ಪಟ್ಟು ಹಿಡಿದಿದ್ದು, ನಿತ್ಯವೂ ಭಯದ ವಾತಾವಣದಲ್ಲಿ ಮಲೆನಾಡಿಗರು ಜೀವನ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES