Sunday, August 24, 2025
Google search engine
HomeUncategorizedಮಂಗಳೂರಿನಲ್ಲಿ ಸೆ.2ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರಿನಲ್ಲಿ ಸೆ.2ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಗಣಪತಿ ವಿಗ್ರಹದ ವಿಸರ್ಜನೆ ನೆಪದಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೆ.2 ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಸೆಪ್ಟೆಂಬರ್​ 2 ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರುತ್ತದೆ ಎಂದು ಹೇಳಲಾಗಿದೆ.

ಇನ್ನು ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮಾ, ಐ.ಟಿ.ಐ ಸೇರಿದಂತೆ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ 2 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಇನ್ನು ಜಿಲ್ಲಾಡಳಿತದ ರಜೆಯ ನಿರ್ಧಾರಕ್ಕೆ ನರೇಂದ್ರ ಮೋದಿ ಕಾರ್ಯಕ್ರಮದ ಕಾರಣಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೀಡಿದ್ರಾ ಎಂಬ ಮಾತು ವ್ಯಕ್ತವಾಗಿದೆ.

RELATED ARTICLES
- Advertisment -
Google search engine

Most Popular

Recent Comments