Tuesday, August 26, 2025
Google search engine
HomeUncategorizedಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಸಿಎಂಗೆ ಎಚ್ಚರಿಕೆ

ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಸಿಎಂಗೆ ಎಚ್ಚರಿಕೆ

ಬೆಂಗಳೂರು : ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳೇ ಸೃಷ್ಟಿಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಳ್ಳುತ್ತಿದೆ.

ವರುಣನ ಆರ್ಭಟಕ್ಕೆ ಜನರು ಮಾತ್ರವಲ್ಲದೆ ದೊಡ್ಡದೊಡ್ಡ ಐಟಿ ಕಂಪನಿಗಳು ಕೂಡ ಬೇಸತ್ತಿದೆ. ಸರಿಯಾದ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುವ ಮೂಲಕ ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ, ಮೂಲಸೌಕರ್ಯ ಸುಧಾರಿಸದಿದ್ದರೆ ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್​ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಕಂಪನಿಗಳ ಸಂಘವೇ ಹೇಳುವಂತೆ ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಐಟಿ ಕಾರಿಡಾರ್ ಪ್ರದೇಶದಲ್ಲಿ ಸಮಪರ್ಕ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸದಿದ್ದರೆ ಐಟಿ ಕಂಪನಿಗಳು ಪರ್ಯಾಯ ಸ್ಥಳ‌ ಹುಡುಕಿಕೊಳ್ಳಲಿವೆ. ಸಪ್ಟೆಂಬರ್1 ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಹೊರವರ್ತುಲ ರಸ್ತೆಗಳಲ್ಲಿ‌ ಇರುವ ಕಂಪನಿಗಳ ಸಂಘ, ಕೆಲವು ಬೇಡಿಕೆಗಳನ್ನ ಮುಂದಿಟ್ಟಿದೆ.

RELATED ARTICLES
- Advertisment -
Google search engine

Most Popular

Recent Comments