ತುಮಕೂರು : ಮಧುಗಿರಿ ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ದಂಡಿನಮಾರಮ್ಮನ ದೇವಾಲಯದ ಜಾತ್ರೆ ನಡೆಯುವ ಬಯಲಿನಲ್ಲಿ ಯುವತಿಯೊಬ್ಬಳು ಬೇವಿನ ಮರಕ್ಕೆ ನೇಣು ಹಾಕಿಕೊಂಡು ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಬೆಳಿಗ್ಗೆ ನಡೆದಿದೆ.
ಮಧುಗಿರಿ ತಾಲೂಕಿನ ಬಸವನಹಳ್ಳಿ ಗ್ರಾಮದ ಹನುಮಂತರಾಯಪ್ಪ ನವರ ಪುತ್ರಿ ಅಶ್ವಿನಿ (19) ಮೃತಪಟ್ಟ ದುರ್ದೈವಿಯಾಗಿದ್ದು. ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಮೃತಳ ತಾಯಿ ಇದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸರ ತನಿಖೆಯಿಂದ ತಿಳಿಯ ಬೇಕಾಗಿದೆ.
ಇನ್ನು ದಂಡಿ ಮಾರಮ್ಮನ ದೇವಾಲಯದ ಬಳಿ ಬೆಳಿಗ್ಗೆ ವಾಯು ವಿಹಾರಕ್ಕೆ ಬಂದವರಿಗೆ ಈ ದೃಶ್ಯ ಕಾಣಿಸಿ ಕೊಂಡಿದ್ದು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮಧುಗಿರಿ ಸಿಪಿಐ ಸರ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪೊಲೀಸರ ತನಿಖೆಯಿಂದ ಸತ್ಯ ಬೆಳಕಿಗೆ ಬರಬೇಕಿದೆ.


