Friday, August 29, 2025
HomeUncategorizedನವೆಂಬರ್​​ವರೆಗೂ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ

ನವೆಂಬರ್​​ವರೆಗೂ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನವೆಂಬರ್​​ವರೆಗೂ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ವರ್ಷ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಸೆಪ್ಟೆಂಬರ್ 1 ರಿಂದ ಇದುವರೆಗೂ 211 ಮಿಮೀ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಉತ್ತರ ಒಳನಾಡಿನಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಇನ್ನು, ಬೆಳಗಾವಿ, ಬೀದರ್, ಕಲಬುರ್ಗಿ ಭಾಗದಲ್ಲಿ ಭಾರೀ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲೂ ಮಳೆ ಸಂಭವವಿದೆ.

RELATED ARTICLES
- Advertisment -
Google search engine

Most Popular

Recent Comments