Thursday, September 11, 2025
HomeUncategorizedPFI ಸಿದ್ದರಾಮಯ್ಯ ಅವರ ಪಾಪದ ಕೂಸು : ಬಿ ಎಸ್ ಯಡಿಯೂರಪ್ಪ

PFI ಸಿದ್ದರಾಮಯ್ಯ ಅವರ ಪಾಪದ ಕೂಸು : ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ : PFI ಸಿದ್ದರಾಮಯ್ಯ ಅವರ ಪಾಪದ ಕೂಸು. ಸಿದ್ದರಾಮಯ್ಯರ ಅಪರಾಧದಿಂದ ಇಷ್ಟೆಲ್ಲ ಅನಾಹುತವಾಗಿದೆ ಎಂದು ಶಿವಮೊಗ್ಗದಲ್ಲಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಅಪರಾಧದಿಂದ ಇಷ್ಟೆಲ್ಲ ಅನಾಹುತವಾಗಿದೆ. ಇಡೀ ದೇಶ ನಮ್ಮ ಜೊತೆಗಿದ್ದಾರೆ. ಅದನ್ನು ನೋಡಿ ಸಿದ್ದರಾಮಯ್ಯ ಅವರಿಗೆ ಸಹಿಸಲಾಗುತ್ತಿಲ್ಲ. ಏನೂ ತೋಚದೆ ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದರು. ಇನ್ನು, ತಪ್ಪಿನ ಅರಿವಾಗಿ ನಾಡಿನ ಜನತೆಯ ಕ್ಷಮೆ ಕೇಳಬೇಕಿತ್ತು. ಈಗಲಾದರೂ ಅವರು ಜಾಗೃತರಾಗಲಿ ಎಂದರು.

ಇನ್ನು, ಸೊರಬದ ರಾಜು ತಲ್ಲೂರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜು ತಲ್ಲೂರು, ಕಾಂಗ್ರೆಸ್ ಮುಖಂಡ. ಅವರ ಬಿಜೆಪಿ ಸೇರ್ಪಡೆ ಯಿಂದ ನಾಲ್ಕೈದು ಕ್ಷೇತ್ರಗಳಿಗೆ ಅನುಕೂಲವಾಗಲಿದೆ. ಅವರು ಯಾವುದೇ ಷರತ್ತು ಹಾಕಿಲ್ಲ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments