Monday, August 25, 2025
Google search engine
HomeUncategorizedಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ಇಂದು ಅಧಿಕಾರ ಸ್ವೀಕಾರ

ಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ಇಂದು ಅಧಿಕಾರ ಸ್ವೀಕಾರ

ಸೇನಾ ಪಡೆಗಳ ಮುಖ್ಯಸ್ಥ ಹುದ್ದೆಗೆ ನೇಮಕಗೊಂಡಿರುವ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಸೌತ್ ಬ್ಲಾಕ್‌ನಲ್ಲಿ ಗೌರವ ವಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ‘ಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಕ್ಕೆ ನಾನು ಹೆಮ್ಮೆಪಡುತ್ತಿದ್ದೇನೆ. ಸಿಡಿಎಸ್‌ ಮುಖ್ಯಸ್ಥನಾಗಿ ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ಜತೆಗೆ ಎಲ್ಲಾ ಸವಾಲುಗಳನ್ನು ಒಟ್ಟಿಗೆ ನಿಭಾಯಿಸುತ್ತೇವೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ, ವಾಯುಪಡೆ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ವಿ.ಆರ್. ಚೌಧರಿ, ನೌಕಾಪಡೆಯ ಉಪ ಅಡ್ಮಿರಲ್ ಎಸ್.ಎನ್.ಘೋರ್ಮಾಡೆ ಮತ್ತು ಏರ್ ಮಾರ್ಷಲ್ ಬಿ.ಆರ್ ಕೃಷ್ಣ ಉಪಸ್ಥಿತರಿದ್ದರು. ಅನಿಲ್ ಚೌಹಾಣ್ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಕೇಂದ್ರದ ರಕ್ಷಣಾ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಕಾರ್ಯನಿರ್ವಹಿಸಲಿದ್ದಾರೆ’ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇನ್ನು, ಅನಿಲ್ ಅವರು ತಮ್ಮ ನಾಲ್ಕು ದಶಕಗಳ ವೃತ್ತಿ ಜೀವನದಲ್ಲಿ ಸೇನೆಯ ಹಲವು ಹುದ್ದೆಗಳನ್ನು ನಿಭಾಯಿಸಿದ್ದು, ಈಶಾನ್ಯ ಭಾರತ ಮತ್ತು ಜಮ್ಮು-ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments