Saturday, August 23, 2025
Google search engine
HomeUncategorizedಮಹಿಳೆಗೆ ಕಪಾಳಮೋಕ್ಷ... ಕ್ಷಮೆಯಾಚಿಸಿದ ಸಚಿವ ವಿ ಸೋಮಣ್ಣ

ಮಹಿಳೆಗೆ ಕಪಾಳಮೋಕ್ಷ… ಕ್ಷಮೆಯಾಚಿಸಿದ ಸಚಿವ ವಿ ಸೋಮಣ್ಣ

ಚಾಮರಾಜನಗರ; ಹಕ್ಕುಪತ್ರ ಕೇಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕ್ಷಮೆಯಾಚಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ‌ ಹಂಗಳ ಗ್ರಾಮದಲ್ಲಿ ಕೆಂಪಮ್ಮ ಎಂಬ ಮಹಿಳೆಯ ಕಪಾಲಕ್ಕೆ ಹೊಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಕೊಳ್ಳೇಗಾಲದಲ್ಲಿ ಅವರು ಮಾತನಾಡಿ, 45 ವರ್ಷ ಹಲವು ಏಳುಬೀಳು ಕಂಡಿದ್ದೇನೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರು ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ ಎಂದು ವಿಷಾಧ ವ್ಯಕ್ತಪಡಿಸಿದರು.

ಹಂಗಳದ ಘಟನೆ ಘಟನೆಯೇ ಅಲ್ಲ, ಹೆಣ್ಣು ಮಗಳು ಪದೇಪದೇ ವೇದಿಕೆ ಮೇಲೆ ಬರ್ತಾ ಇದ್ದಳು. ತಾಯಿ ಎಷ್ಟು ಸಾರಿ ಬರ್ತೀಯ ತಾಯಿ ಅಂತ ವಿಚಾರಿಸಿದೆ, ನಿನ್ನ ಸಮಸ್ಯೆ ಬಗೆ ಹರಿಸ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ. ಅಷ್ಟೇ ವಿನಃ ಇನ್ನೇನು ಉದ್ದೇಶ ಇರಲಿಲ್ಲ. ಹೆಣ್ಣು ಮಕ್ಕಳ ಬಗ್ಗೆ ನನಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಪ್ರತಿಯೊಬ್ಬರನ್ನು ಅಮ್ಮ, ತಾಯಿ ಎಂದೇ ಕರೆಯುತ್ತೇನೆ.

ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಅವರು ಸ್ಪಷ್ಟನೆ ಕೊಡುವ ಮೂಲಕ ಸಮರ್ಥನೆ ಮಾಡಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments