Thursday, August 28, 2025
HomeUncategorizedಮಂಗಳೂರಿನ ಕರಾವಳಿ ಕಾಲೇಜಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮ

ಮಂಗಳೂರಿನ ಕರಾವಳಿ ಕಾಲೇಜಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮ

ಮಂಗಳೂರು : ಬೆಳಕಿನ ಹಬ್ಬ ದೀಪಾವಳಿಯನ್ನು ಎಲ್ಲೆಡೆ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ತಿಂದು ಸಂಭ್ರಮದಿಂದ ಆಚರಿಸುತ್ತಾರೆ.. ಆದರೆ ದೇಶದ ವಿವಿಧೆಡೆಯಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಬರುವ ವಿದ್ಯಾರ್ಥಿಗಳು ದೀಪಾವಳಿ ಹಬ್ಬಕ್ಕೆ ತಮ್ಮ ಊರಿಗೆ ಹೋಗಲು ಸಾಧ್ಯವಾಗೋದಿಲ್ಲ. ಇದಕ್ಕಾಗಿಯೇ ಮಂಗಳೂರಿನ ಕೊಟ್ಟಾರದಲ್ಲಿರುವ ಕರಾವಳಿ ಗ್ರೂಫ್ ಆಫ್ ಕಾಲೇಜು, ವಿಭಿನ್ನ ಕಾರ್ಯಕ್ರಮವನ್ನು ಆಯೋಜಿಸಿತ್ತು. ದೀಪಾವಳಿ ರಜೆಯಲ್ಲಿ ಊರಿಗೆ ಹೋಗಲಾಗದೆ ವಿದ್ಯಾರ್ಥಿಗಳು ವ್ಯಥೆ ಪಡಬಾರದೆಂದು ಎಲ್ಲ ವಿದ್ಯಾರ್ಥಿಗಳಿಗಾಗಿ ಕಾಲೇಜು ಆವರಣದಲ್ಲೇ ಅದ್ದೂರಿಯಾಗಿ ಹಬ್ಬವನ್ನು ಆಚರಿಸಲಾಯಿತು.

ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಆಯಾ ಪ್ರದೇಶದ ಆಚರಣೆಯನ್ನು ತಮ್ಮ ನೃತ್ಯ ವೈವಿಧ್ಯದ ಮೂಲಕ ತೋರಿಸಿದರೆ. ಕೆಲವರು ಜಾನಪದ, ಫಿಲ್ಮಿ ಡ್ಯಾನ್ಸ್, ಫ್ಯಾಷನ್ ಶೋ ಪ್ರದರ್ಶನ ತೋರಿದರು. ಜೊತೆಗೆ ಎಲ್ಲಾ ವಿದ್ಯಾರ್ಥಿಗಳು ಜಾತಿ ಮತದ ಭೇದ ಮರೆತು ದೀಪಗಳನ್ನು ಹಚ್ಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಹೆಚ್ಚಿನ ಕಾಲೇಜು ಆಡಳಿತ ಮಂಡಳಿಗಳು ಕೇವಲ ಶಿಕ್ಷಣ ನೀಡಿ ಕೈತೊಳೆದುಕೊಳ್ಳುತ್ತವೆ. ಆದರೆ ಈ ಕಾಲೇಜು ಮಾತ್ರ ಮನೆಯವರಿಂದ ದೂರವಿರೋ ವಿದ್ಯಾರ್ಥಿಗಳಿಗೆ ಹಬ್ಬಗಳನ್ನು ಆಚರಿಸಲು ಸಾಧ್ಯವಾಗುತ್ತಿಲ್ಲ ಅನ್ನುವ ಕೊರಗು ಇರಬಾರದೆಂಬ ಕಾರಣಕ್ಕೆ ದೀಪಗಳ ಹಬ್ಬವನ್ನು ಆಚರಿಸಿದ್ದು ವಿಶೇಷವಾಗಿತ್ತು.

ಗಿರಿಧರ್ ಶೆಟ್ಟಿ, ಪವರ್ ಟಿವಿ, ಮಂಗಳೂರು

RELATED ARTICLES
- Advertisment -
Google search engine

Most Popular

Recent Comments