Sunday, August 24, 2025
Google search engine
HomeUncategorizedಬಾಂಗ್ಲಾ ವಿರುದ್ಧ ಭಾರತಕ್ಕೆ 5 ರನ್​ಗಳ ಗೆಲುವು

ಬಾಂಗ್ಲಾ ವಿರುದ್ಧ ಭಾರತಕ್ಕೆ 5 ರನ್​ಗಳ ಗೆಲುವು

ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಟೀಂ ಇಂಡಿಯಾ 5 ರನ್‌ಗಳ ರೋಚಕ ಜಯ ಸಾಧಿಸಿದೆ.

ಈ ಮೂಲಕ ಸೂಪರ್ 12 ಹಂತದ ಗ್ರೂಪ್ 2 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿದ್ದು ಸೆಮೀಸ್‌ಗೆ ಮತ್ತಷ್ಟು ಹತ್ತಿರವಾಗಿದೆ. ಮೊದಲು ಬ್ಯಾಟಿಂಗ್​ ಮಾಡಿದ ಟೀಂ ಇಂಡಿಯಾ 184 ರನ್ ಕಲೆಹಾಕುವ ಮೂಲಕ ಬಾಂಗ್ಲಾದೇಶಕ್ಕೆ ಸವಾಲಿನ ಗುರಿ ನೀಡಿತು.

ಇನ್ನು, ಮಳೆಯಿಂದಾಗಿ 151 ರನ್‌ಗಳ ಸವಾಲಿನ ಗುರಿ ಪಡೆದ ಬಾಂಗ್ಲಾದೇಶ ತಂಡ 6 ವಿಕೆಟ್ ಕಳೆದುಕೊಂಡು 145 ರನ್ ಬಾರಿಸುವ ಮೂಲಕ ರೋಚಕ ಸೋಲು ಅನುಭವಿಸಿತು. ಭಾರತ ನೀಡಿದ್ದ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು ಸ್ಪೋಟಕ ಆರಂಭವನ್ನೇ ಪಡೆಯಿತು. ಪವರ್‌ ಪ್ಲೇನಲ್ಲೇ ಮೊದಲ ವಿಕೆಟ್‌ಗೆ 60 ರನ್‌ಗಳ ಜತೆಯಾಟವಾಡುವ ಮೂಲಕ ಭರ್ಜರಿ ಆರಂಭ ಒದಗಿಸಿಕೊಟ್ಟರು.

ವಿಸ್ಪೋಟಕ ಬ್ಯಾಟಿಂಗ್ ನಡೆಸಿದ ಲಿಟನ್ ದಾಸ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಭಾರತೀಯ ಬೌಲರ್‌ಗಳು ಕಂಗಾಲಾಗುವಂತೆ ಮಾಡಿದರು. 7 ಓವರ್ ಅಂತ್ಯದ ವೇಳೆಗೆ ಬಾಂಗ್ಲಾದೇಶ ತಂಡವು ವಿಕೆಟ್‌ ನಷ್ಟವಿಲ್ಲದೇ 66 ರನ್‌ ಗಳಿಸಿದ್ದಾಗ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು.

RELATED ARTICLES
- Advertisment -
Google search engine

Most Popular

Recent Comments