Tuesday, September 2, 2025
HomeUncategorizedವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ನಾಡಪ್ರಭು ಕೆಂಪೇಗೌಡ ಪ್ರತಿಮೆ.!

ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ನಾಡಪ್ರಭು ಕೆಂಪೇಗೌಡ ಪ್ರತಿಮೆ.!

ಬೆಂಗಳೂರು: ನಾಡಪ್ರಭು ಕೆಂಪೇಗೌಡ “ಪ್ರಗತಿಯ ಪ್ರತಿಮೆ”ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಗರಿಗೆ ಪಾತ್ರವಾಗಿದೆ.

ಈ ವಿಷಯವನ್ನ ಸಿಎಂ ಬಸವರಾಜ್​ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಹಂಚಿಕೊಂಡಿದ್ದು, ಕೆಂಪೇಗೌಡರ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರುತ್ತಿರೋದು ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ. 

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವೇಶಿಸುವಾಗ ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿಂತಿದೆ. ನವೆಂಬರ್ 11ರಂದು ಅಂದರೆ ನಾಳೆ ಪ್ರಧಾನಿ ನರೇಂದ್ರ ಮೋದಿ ನಗರದ ಅತಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments