ಮಧ್ಯಂತರ ಅರ್ಜಿ ಮುಂದಕ್ಕೆ; ಸದ್ಯಕ್ಕೆ ಬಾಲಿವುಡ್ ನಟಿ ಜಾಕ್ವೆಲಿನ್​ ಫರ್ನಾಂಡೀಸ್ ನಿರಾಳ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಕೇಸ್​ಗೆ ಸಂಬಂಧಿಸಿದಂತೆ ಸದ್ಯಕ್ಕೆ ಬಾಲಿವುಡ್ ನಟಿ ಜಾಕ್ವೆಲಿನ್​ ಫರ್ನಾಂಡೀಸ್ ಅವರಿಗೆ ರಿಲೀಫ್​ ಸಿಕ್ಕಿದೆ.

ಅಕ್ರಮವಾಗಿ 200 ಕೋಟಿ ಹಣ ವರ್ಗಾವಣೆ ಕೇಸ್​ ಹಿನ್ನಲೆಯಲ್ಲಿ ಇಂದು ಮಧ್ಯಂತರ ಜಾಮೀನು ಅರ್ಜಿಯ ವಿಸ್ತರಣೆ ಕುರಿತಂತೆ ವಿಚಾರಣೆ ನಡೆಸಿದ  ದೆಹಲಿಯ ಪಾಟಿಯಾಲ ಹೌಸ್ ಕೋರ್ಟ್, ಜಾಕ್ವೆಲಿನ್ ಫರ್ನಾಂಡಿಸ್ ಅವರ jಜಾಮೀನು ಇಂದು ಕೊನೆಗೊಳ್ಳುತ್ತು. ಈ ಹಿನ್ನಲೆಯಲ್ಲಿ ಇಂದು ಮತ್ತೆ ಅವರ ಮಧ್ಯಂತರ ಜಾಮೀನು ಅವಧಿಯನ್ನು ಮಂಗಳವಾರದವರೆಗೆ(ನವೆಂಬರ್​ 15) ವಿಸ್ತರಿಸಲಾಗಿದೆ.

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಸುಲಿಗೆ ಪ್ರಕರಣದ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಆರೋಪಿ ಎಂದು ಹೆಸರಿಸಲಾಗಿದೆ.

RELATED ARTICLES

Related Articles

TRENDING ARTICLES