Home ರಾಜ್ಯ ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ. 

ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ ಕಾರಣಕ್ಕಾಗಿ ಇಂದು ಬೆಳಿಗ್ಗೆ ಈ ವ್ಯಕ್ತಿಯನ್ನು ನಗರದ ಎನ್.ಹೆಚ್. ಆಸ್ಪತ್ರೆಗೆ ಕರೆತರಲಾಗಿತ್ತು.  ಈ ವೇಳೆ, ಈತನಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಈತನಿಗೆ ಪಾಸಿಟಿವ್ ಬಂದಿದೆ ಎಂದು ವೈದ್ಯರು ತಿಳಿಸಿದರು. ಇದಕ್ಕೆ ಬೆದರಿದ ಈ ವ್ಯಕ್ತಿ, ಆಸ್ಪತ್ರೆಯಿಂದ ಓಡಿ ಹೋಗಿ, ಆಸ್ಪತ್ರೆ ಮುಂಭಾಗದಲ್ಲಿದ್ದ ಭತ್ತದ ಗದ್ದೆಯಲ್ಲಿ ಅವಿತುಕೊಂಡಿದ್ದ. 

ಹೌದು, ಶಿವಮೊಗ್ಗದ ಗಾಂಧಿ ಬಜಾರಿನ 48 ವರ್ಷದ ಹರೀಶ್ ಲಾಲ್ ಎಂಬ ಈ ವ್ಯಕ್ತಿಯಾಗಿದ್ದು, ತನಗೆ ಪಾಸಿಟಿವ್ ಬಂದಿದೆ ಎಂದು ತಿಳಿದಿದ್ದೇ ತಡ, ಓಡಿ ಹೋಗಿ ಭತ್ತದ ಗದ್ದೆಯಲ್ಲಿ ಅವಿತುಕೊಂಡಿದ್ದ. ಈ ವೇಳೆ, ತಪ್ಪಿಸಿಕೊಂಡಿದ್ದ ಸೋಂಕಿತನಿಗೆ ಆಸ್ಪತ್ರೆ ಸಿಬ್ಭಂಧಿ ಓಡಿಸಿಕೊಂಡು ಬಂದಿದ್ರು. ಈ ವೇಳೆ, ಸೋಂಕಿತ ಭತ್ತದ ಗದ್ದೆಯಲ್ಲಿರುವುದು ಪತ್ತೆ ಹಚ್ಚಿ, ಪುನಃ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಕೆಲಕಾಲ ಈತ ಆಸ್ಪತ್ರೆ ಸಿಬ್ಭಂಧಿಗೆ ತಲೆನೋವು ತರಿಸಿದ್ದು, ಕೊನೆಗೂ ಸೋಂಕಿತ ಆಸ್ಪತ್ರೆಗೆ ಕರೆದೊಯ್ದು, ಸಿಬ್ಭಂಧಿ ನಿಟ್ಟುಸಿರು ಬಿಟ್ಟಿದ್ದಾರೆ. ಬಳಿಕ ಈತನನ್ನು ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments