Home ದೇಶ-ವಿದೇಶ ಆಧಾರ್ ಕಾರ್ಡ್ ಇದ್ದರೆ ಮಾತ್ರ ಸಲೂನ್​, ಬ್ಯೂಟಿ ಪಾರ್ಲರ್​ಗೆ ಎಂಟ್ರಿ

ಆಧಾರ್ ಕಾರ್ಡ್ ಇದ್ದರೆ ಮಾತ್ರ ಸಲೂನ್​, ಬ್ಯೂಟಿ ಪಾರ್ಲರ್​ಗೆ ಎಂಟ್ರಿ

ಚೆನ್ನೈ: ಲಾಕ್​ಡೌನ್ ಸಡಿಲಿಕೆ ಬಳಿಕ ಸಲೂನ್, ಬ್ಯೂಟಿ ಪಾರ್ಲರ್ ಹಾಗೂ ಸ್ಪಾಗಳನ್ನು ತೆರೆಯಲು ಅವಕಾಶಗಳನ್ನು ನೀಡಲಾಗಿದೆ. ಆದರೆ ಸಲೂನ್ ಹಾಗೂ ಬ್ಯೂಟಿ ಪಾರ್ಲರ್​ಗೆ ಹೋಗುವ ಪ್ರತಿಯೊಬ್ಬರು ಆಧಾರ್ ಸಂಖ್ಯೆ ಹಾಗೂ ಮೊಬೈಲ್ ನಂಬರ್​ಗಳನ್ನು ನೀಡಬೇಕು ಎಂದು ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಆಯುಕ್ತ ಜೆ.ರಾಧಾ ಕೃಷ್ಣನ್‌ ಚೆನ್ನೈ ಮಹಾನಗರ ಪಾಲಿಕೆ ಮತ್ತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. 

ತಮಿಳುನಾಡು ದೇಶದ ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಕೇಂದ್ರ ಲಾಕ್​ಡೌನ್ ಸಡಿಲಿಸಿ ವಾಣಿಜ್ಯ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.ಹೀಗಾಗಿ ಸ್ಪಾ, ಸಲೂನ್ ಹಾಗೂ ಬ್ಯೂಟಿಪಾರ್ಲರ್​ಗಳಿಗೆ ಭೇಟಿ ನೀಡುವ ಗ್ರಾಹಕರ ಹೆಸರು ಹಾಗೂ ವಿಳಾಸವನ್ನು ದಾಖಲಿಸಬೇಕೆಂದು ತಮಿಳುನಾಡು ಸರ್ಕಾರ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದೆ. ಈ ತರಹದ ಕ್ರಮಗಳನ್ನು ಕೈಗೊಳ್ಳುವುದರಿಂದ ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚಲು ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಸರ್ಕಾರ ಹೊರಡಿಸಿರುವ ಕಾರ್ಯಸೂಚಿಯಲ್ಲಿ ಇನ್ನೂ ಕೆಲವೊಂದು ಅಂಶಗಳನ್ನು ಒಳಗೊಂಡಿದೆ. ಅವುಗಳು ಈ ಕೆಳಗಿನಂತಿವೆ.

  • ಸಲೂನ್, ಸ್ಪಾ ಹಾಗೂ ಬ್ಯೂಟಿ ಪಾರ್ಲರ್​ಗಳಲ್ಲಿ ಕೆಲಸ ಮಾಡುವವರು ಗ್ಲೌಸ್ ಹಾಗೂ ಮಾಸ್ಕ್ ಧರಿಸಬೇಕು.
  • ಗ್ರಾಹಕರನ್ನು ಮುಟ್ಟುವ ಮೊದಲು ಕೈಗಳನ್ನು ಕಡ್ಡಾಯವಾಗಿ ತೊಳೆದುಕೊಳ್ಳಬೇಕು, ಸ್ಯಾನಿಟೈಸರ್ ಬಳಕೆ ಮಾಡಬೇಕು.
  • ಸಲೂನ್​ಗಳಲ್ಲಿ ಬ್ಲೇಡ್​ಗಳನ್ನು ಮರುಬಳಕೆ ಮಾಡುವಂತಿಲ್ಲ.
  • ಶೀತ, ಕೆಮ್ಮು ಇರುವ ಕೆಲಸಗಾರರನ್ನು ಕೆಲಸಕ್ಕೆ ಇಟ್ಟುಕೊಳ್ಳುವಂತಿಲ್ಲ. ಶೀತ, ಕೆಮ್ಮು ಇರುವವರು ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಳ್ಳಿ  

LEAVE A REPLY

Please enter your comment!
Please enter your name here

- Advertisment -

Most Popular

ಕೊರೋನಾಗೆ ಕ್ಯಾರೆ ಅನ್ನದೆ ನೃತ್ಯ ಮಾಡಿ ಧೈರ್ಯ ತುಂಬಿದ ಹೋಟೆಲ್ ಮಾಲಕ

ಉಡುಪಿ : ಕೋರೊನಾ ಬಂದ್ರೆ ನಮ್ಮ ಕಥೆ ಮುಗಿತು ಅನ್ನೋ ಈ ಸಂದರ್ಭದಲ್ಲಿ, ಕೋಟದ ಕೊರೋನಾ ಪಾಸಿಟಿವ್ ವ್ಯಕ್ತಿಯೋರ್ವರು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೋಟದ ಹೋಟೆಲ್ ಮಾಲಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ...

ಸಂಬಳ ಕೇಳಿದರೆ ಕೆಲಸದಿಂದ ತೆಗೆಯುತ್ತೇವೆ ! ವಿಮ್ಸ್​​ನಲ್ಲಿ ಇದೆಂಥಾ ಅಮಾನವೀಯತೆ ?

ಬಳ್ಳಾರಿ : ಕಳೆದ ಆರು ತಿಂಗಳಿನಿಂದ ಸಂಬಳವೇ ಸಿಕ್ಕಿಲ್ಲ ಅಂತ ಬಳ್ಳಾರಿಯ ವಿಮ್ಸ್ ನಲ್ಲಿ ಗುತ್ತಿಗೆ ಆಧಾರಿತ ಸಿಬ್ಬಂದಿ ಧರಣಿ ಕೂತಿದ್ದಾರೆ. ಕೊರೊನಾ ವಾರಿಯರ್ ಅಂತ ಸರ್ಕಾರ ನಮ್ಮನ್ನ ಕರೆಯುತ್ತೆ. ಆದ್ರೆ ನಮಗೆ...

ಕೊರೋನಾ ಗೆದ್ದ 96 ವೃದ್ಧೆ ಈಗ ಕೊರೋನಾ ರೋಗಿಗಳಿಗೆ ಸ್ಫೂರ್ತಿ

ಚಿತ್ರದುರ್ಗ : ಕೊರೋನಾ ಸೋಂಕಿನ ಭೀತಿ ಎಲ್ಲೆಡೆ ಹಬ್ಬಿದ್ದರೂ, ಆತ್ಮಿವಿಶ್ವಾಸವೊಂದಿದ್ದರೆ ಕೊರೋನಾ ಸೋಂಕಿನಿಂದ ಗುಣವಾಗಬಹುದು ಎನ್ನುವುದಕ್ಕೆ ಈ ವೃದ್ಧೆಯೇ ಸಾಕ್ಷಿ. ಚಿತ್ರದುರ್ಗ  ‌ಜಿಲ್ಲೆಯ ಹಿರಿಯೂರು ಮೂಲದ 96 ವರ್ಷದ ವೃದ್ದೆ ಕರೋನಾ ಸೋಂಕಿನಿಂದ...

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ, ಪ್ರಕರಣ ದಾಖಲು

ಉಡುಪಿ : ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ನಿಯಮ ಉಲ್ಲಂಘಿಸಿ ಉಡುಪಿಯಿಂದ ಕಾರ್ಕಳ ಪ್ರಯಾಣಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿದ ಕೊಡಂಕೂರು ನಿವಾಸಿ ವಿನಯ್ ಕುಮಾರ್ ಮೇಲೆ ಉಡುಪಿಯ ನಗರ ಠಾಣೆಯಲ್ಲಿ...