Home uncategorized ಎಸಿಬಿ ಬಲೆಗೆ ಬಿದ್ದ ನಾಯಕನ ಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಭೂತಪ್ಪ

ಎಸಿಬಿ ಬಲೆಗೆ ಬಿದ್ದ ನಾಯಕನ ಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಭೂತಪ್ಪ

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭೂತಪ್ಪ ಹಾಗೂ ಅಕೌಂಟ್ಸ್ ಕನ್ಸಲ್‍ಟೆಂಟ್ ಸರ್ಪರಾಜ್ ಇಂದು ಕಚೇರಿಯಲ್ಲಿ ರೂ.5000 ಲಂಚ ಸ್ವೀಕರಿಸುತ್ತಿರುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಾರ್ಯಾಲಯಕ್ಕೆ ಅವಶ್ಯವಿರುವ ಅಲ್ಯೂಮಿನಿಯಂ ಗ್ಲಾಸ್ ಪಾರ್ಟಿಶಿಯನ್ ಸಾಮಗ್ರಿಗಳನ್ನು ಪೂರೈಸಲು ಪಟ್ಟಣ ಪಂಚಾಯಿತಿಯಿಂದ ರೂ.99643 ಗಳಿಗೆ ವೈ.ಆರ್ ನಾಗೇದ್ರ ಇವರಿಗೆ ಕಾರ್ಯಾದೇಶ ನೀಡಿದ್ದು ಸಾಮಗ್ರಿಗಳನ್ನು ಸರಬರಾಜು ಮಾಡಿದ್ದು ಆ ಮೊತ್ತದಲ್ಲಿ 60000 ರೂ ಗಳನ್ನು ಜಮಾಮಾಡಲಾಗಿತ್ತು. ಉಳಿದ ಬಾಕಿ ಮೊತ್ತ 39,643 ರೂ ಗಳನ್ನು ಪಾವತಿಸಲು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸರ್ಫರಾಜ್ ಅವರ ಮೂಲಕ 5000 ರೂ ಗಳನ್ನು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದ ಅಂಗಡಿ ಮಾಲಿಕ ಆಗಸ್ಟ್ 27 ರಂದು ಎಸಿಬಿಗೆ ನೀಡಿದ ದೂರಿನ ಮೇರೆಗೆ ಡಿವೈಎಸ್‍ಪಿ ಪರಮೇಶ್ವರ್ ಹೆಚ್.ಎಸ್ ಇನ್ಸ್‍ಸ್ಪೆಕ್ಟರ್ ಪ್ರಹ್ಲಾದ್ ಆರ್ ಚನ್ನಗಿರಿ ಮತ್ತು ಚೈತನ್ಯ ಸಿ.ಜೆ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ವಶಪಡಿಸಿ ದಸ್ತಗಿರಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಿ ಎಂದು...

‘ಪಿಬಿ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಗಬ್ಬೂರು ಬೈಪಾಸ್ ಬಂದ್’

ಹುಬ್ಬಳ್ಳಿ: ಪುಣಾ-ಬೆಂಗಳೂರ ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗಬ್ಬೂರು ಬೈಪಾಸ್ ಗೆ...

ಜ. 26 ರಂದು ಪರ್ಯಾಯ ರೈತ ಗಣರಾಜ್ಯೋತ್ಸವ ಪರೆಡ್: ಶಾಂತಕುಮಾರ

ಹುಬ್ಬಳ್ಳಿ : ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 26 ರಂದು ರೈತರ ಪರ್ಯಾಯ ಗಣರಾಜ್ಯೋತ್ಸವ ಪರೆಡ್ ಹಮ್ಮಿಕೊಳ್ಳಲಾಗಿದೆ. ಅಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ , ಮೋಟಾರ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ...

‘ಠಾಕ್ರೆ ಟ್ವೀಟ್ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ’

ಬೆಂಗಳೂರು: ಮಾಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಟ್ವೀಟ್ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಉದ್ದವ್ ಠಾಕ್ರೆ ಭೂತದಹನ...

Recent Comments