Home ರಾಜ್ಯ ಬೆಂಗಳೂರು ಟಿಡಿಆರ್ ಹಗರಣದ ಪ್ರಮುಖ ಆರೋಪಿ ಮನೆಗೆ ಎಸಿಬಿ ದಾಳಿ

ಟಿಡಿಆರ್ ಹಗರಣದ ಪ್ರಮುಖ ಆರೋಪಿ ಮನೆಗೆ ಎಸಿಬಿ ದಾಳಿ

ಬೆಂಗಳೂರು: ನಗರದಲ್ಲಿ ಉದ್ಯಮಿ ಮನೆಗೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಟಿಡಿಆರ್ ಹಗರಣದ ಪ್ರಮುಖ ಆರೋಪಿ, ವಾಲ್ ಮಾರ್ಟ್​ ಕಂಪನಿ ಮಾಲೀಕ ರತನ್​ಲಾಲ್​ ಮನೆ, ಕಚೇರಿಯಲ್ಲಿ ಪರಿಶೀಲನೆ ನಡೆದಿದೆ.

ಬೆಳಗ್ಗೆ 4 ಗಂಟೆಯಿಂದಲೂ ಗೋಲ್ಡನ್ ಎನ್​ಕ್ಲೇವ್ ಅಪಾರ್ಟ್​ಮೆಂಟ್​ಮೆಂಟ್​ನಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಡಿವೈಎಸ್​ಪಿ ರವಿಕುಮಾರ್ ಸೇರಿ 9 ಮಂದಿ ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದ್ದು, ರತನ್​ಲಾಲ್​ ಮನೆ, ಕಚೇರಿ ಸೇರಿ 5 ಕಡೆ ದಾಳಿ ಮಾಡಲಾಗಿದೆ. ರತನ್​ಲಾಲ್ ಅವರ ಎಚ್​ಎಎಲ್​ ಬಳಿಯಿರುವ ನಿವಾಸ, ರೆಸಿಡೆನ್ಸಿ ರಸ್ತೆಯಲ್ಲಿರುವ ಕಚೇರಿಯನ್ನೂ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಇಂದಿರಾನಗರದಲ್ಲಿರುವ ವಾಲ್ ಮಾರ್ಟ್​ ಕಂಪನಿ ಮ್ಯಾನೇಜರ್ ಅಮಿತ್ ಬೋಳಾರ ಎಂಬುವರ ಮನೆ ಮೇಲೂ ದಾಳಿ ನಡೆದಿದೆ. ಟಿಡಿಆರ್ ಹಗರಣ ಸಂಬಂಧ ಎಸಿಬಿ ದಾಳಿ ನಡೆದಿದ್ದು, ಕಳೆದ 10 ದಿನಗಳಲ್ಲಿ ನಡೆದ ಮೂರನೇ ದಾಳಿ ಇದಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments