Home ರಾಜ್ಯ 'ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮನೆ ಮೇಲೆ ಎಸಿಬಿ ರೈಡ್'

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮನೆ ಮೇಲೆ ಎಸಿಬಿ ರೈಡ್’

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮನೆ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಸಿದ್ದಾರೆಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ, ಹಣ, ಬಂಗಾರ ಇರುವುದು ಕಂಡು ಬಂದಿದೆ ಎಂದು ಹೇಳಲಾಗಿದೆ. 

ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜಿ.ಜಿ. ಸುರೇಶ್ ಎಂಬುವವರೇ ಈ ಅಧಿಕಾರಿಯಾಗಿದ್ದು, ಭ್ರಷ್ಟಾಚಾರ ನಿಗ್ರಹದಳ ಪೂರ್ವ ವಲಯದ ಅಧಿಕಾರಿಗಳ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.  ಎಸಿಬಿ ಎಸ್.ಪಿ. ಜಯಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 

ನಗರದ ಗುಂಡಪ್ಪ ಶೆಡ್ ನ ಮಲ್ಲೇಶ್ವರ ನಗರದ 1 ನೇ ಹಂತ, 2 ನೇ ಕ್ರಾಸ್ ನಲ್ಲಿರುವ ಇಲಾಖೆ ಉಪನಿರ್ದೇಶಕ ಸುರೇಶ್ ಅವರ ನಿವಾಸವಿದ್ದು, ಆಪಾದಿತ ಅಧಿಕಾರಿ ಸುರೇಶ್ ಅವರ ಗೋಪಾಲಗೌಡ ಬಡಾವಣೆಯ ನಿವಾಸ ಮತ್ತು ಭದ್ರಾವತಿಯ ಹುಣಸೇಕಟ್ಟೆ ಗ್ರಾಮದ ಸರ್ವೆ ನಂ. 13 ರಲ್ಲಿರುವ ತೋಟ ಮತ್ತು ತೋಟದಲ್ಲಿರುವ ಮನೆ ಹಾಗೂ ಅವರು ಕೆಲಸ ನಿರ್ವಹಿಸುತ್ತಿರುವ ಶಿವಮೊಗ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರ ಕಚೇರಿ ಮೇಲೂ ಏಕ ಕಾಲದಲ್ಲಿಯೇ ಈ ದಾಳಿ ನಡೆಸಲಾಗಿದೆ. 

ಒಟ್ಟು 3 ನಿವಾಸ ಮತ್ತು ತೋಟ ಹಾಗೂ ಕಚೇರಿಯಲ್ಲಿ ಶೋಧನಾ ಕಾರ್ಯ ಮುಂದುವರೆದಿದ್ದು, ಅಕ್ರಮ ಆಸ್ತಿ ಎಷ್ಟಿದೆ ಎಂಬುದರ ಕುರಿತಂತೆ, ಎಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments