ಗದಗ : SSLC ಪರೀಕ್ಷೆ ಮುಗಿಸಿ ಬೈಕ್ ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿಯಾಗಿ ಗಂಭೀರ ಗಾಯವಾಗಿರೋ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ನಡೆದಿದೆ. ಸಿದ್ದಪ್ಪ ತಳವಾರ,ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಅನ್ನೋ ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು SSLC ಪರೀಕ್ಷೆ ನಿಮಿತ್ತ ಪಕ್ಕದ ಕಲಕೇರಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮುಗಿಸಿದ ಮೂವರು ವಿದ್ಯಾರ್ಥಿಗಳು ಬೈಕನಲ್ಲಿ ತಮ್ಮೂರಿಗೆ ತೆರಳುವ ವೇಳೆ ಈ ಅಪಘಾತ ನಡೆದಿದೆ.ಇನ್ನು ಮುಂಡರಗಿ ಮಾರ್ಗವಾಗಿ ಬರುತ್ತಿದ್ದ ಲಾರಿ ಹಾಗೂ ಟಿಪ್ಪರ್ ಓವರಟೆಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ ಹಾಗೂ ರಸ್ತೆ ಬದಿಯಲ್ಲಿ ನಿಂತಿದ್ದ ವೈದ್ಯರ ವಾಹನಕ್ಕೂ ಲಾರಿ ಡಿಕ್ಕಿ ಹೊಡೆದಿದೆ ಅಂತಾ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸದ್ಯ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಮುಂಡರಗಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಗದಗನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಮುಂಡರಗಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
SSLC ಪರೀಕ್ಷೆ ಮುಗಿಸಿ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ : ವಿದ್ಯಾರ್ಥಿಗಳ ಸ್ಥಿತಿ ಗಂಭೀರ
LEAVE A REPLY
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on
zithromax class
buy zithromax 250 mg online