Home ರಾಜ್ಯ ತಂದೆಯನ್ನೇ ಹತ್ಯೆಗೈದ ಪಾಪಿ ಮಗ ಕೊನೆಗೂ ಅಂದರ್...!

ತಂದೆಯನ್ನೇ ಹತ್ಯೆಗೈದ ಪಾಪಿ ಮಗ ಕೊನೆಗೂ ಅಂದರ್…!

ದಕ್ಷಿಣ ಕನ್ನಡ: ತಂದೆಯನ್ನೆ ತಲವಾರು ಬೀಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿ ಮಗನನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗಸ್ಟ್ 24ರ ಬೆಳಿಗ್ಗೆ ವಾಕಿಂಗ್ ತೆರಳಿದ್ದ ವಾಸು ಸಫಲ್ಯ (66) ಅವರನ್ನ ತಲವಾರಿನಿಂದ ಹಲ್ಲೆ ನಡೆಸಿ ಬೆಳ್ತಂಗಡಿ ತಾಲ್ಲೂಕಿನ ಜ್ಯೂನಿಯರ್ ಕಾಲೇಜು ಬಳಿ ಹತ್ಯೆಗೈಯ್ಯಲಾಗಿತ್ತು.‌ ಹತ್ಯೆ ನಡೆದ ಮರುಕ್ಷಣದಿಂದಲೇ ವಾಸು ಸಫಲ್ಯ ಅವರ ಮಗ ದಯಾನಂದ ನಾಪತ್ತೆಯಾಗಿದ್ದ. ಇದರಿಂದ ಮಗನ ಮೇಲೆಯೆ ಕೊಲೆ ಶಂಕೆ ವ್ಯಕ್ತವಾಗಿ, ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.‌ ಸತತ ಕಾರ್ಯಾಚರಣೆ ಬಳಿಕ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿ ಆರೋಪಿ ದಯಾನಂದ (38) ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವೃತ್ತಿಯಲ್ಲಿ ಚಾಲಕನಾಗಿದ್ದ ಆರೋಪಿ ದಯಾನಂದ, ಹತ್ಯೆಗೈದ ಬಳಿಕ ಮಂಗಳೂರು ನಗರದ ನಂತೂರು ಎಂಬಲ್ಲಿ ಉದ್ಯಮಿಯೊಬ್ಬರ ಕಾರು ಚಾಲಕನಾಗಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ. ಬಂಧಿತ ಆರೋಪಿ ಕೃತ್ಯವನ್ನ ತಾನೊಬ್ಬನೇ ನಡೆಸಿದ್ದನ್ನ ಒಪ್ಪಿಕೊಂಡಿದ್ದಾಗಿ ತಿಳಿದುಬಂದಿದೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಬಿಎಂ ಲಕ್ಷ್ಮೀಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ ನೇತೃತ್ವದಲ್ಲಿ PSI ನಂದಕುಮಾರ್ ಹಾಗೂ ಅವರ ತಂಡ ಆರೋಪಿಯನ್ನ 48 ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

-ಇರ್ಷಾದ್ ಕಿನ್ನಿಗೋಳಿ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments