Home ರಾಜ್ಯ ನಕಲಿ ಮದ್ಯ ಮಾರುತ್ತಿದ್ದವರ ದಾಬಾಗಳ ಮೇಲೆ ದಾಳಿ : ಆರೋಪಿಗಳು ಅರೆಸ್ಟ್​!

ನಕಲಿ ಮದ್ಯ ಮಾರುತ್ತಿದ್ದವರ ದಾಬಾಗಳ ಮೇಲೆ ದಾಳಿ : ಆರೋಪಿಗಳು ಅರೆಸ್ಟ್​!

ಗದಗ : ಜಿಲ್ಲೆಯ ಅಬಕಾರಿ ಇಲಾಖೆಯಿಂದ ದಾಬಾಗಳ ಮೇಲೆ ದಾಳಿ ಮಾಡಿ ಸಾವಿರಾರು ರೂ. ಮೌಲ್ಯದ ನಕಲಿ ಮದ್ಯ ವಶಪಡಿಸಿಕೊಂಡು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ.

ದಾಬಾಗಳಲ್ಲಿ ನಕಲಿ ಮದ್ಯ ಮಾರಾಟ ಮಾಡುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿರುವ ಜೈ ಮಾತಾ ಧಾಬಾ ಹಾಗೂ ಮುಂಡರಗಿ ಪಟ್ಟಣದಲ್ಲಿರುವ ಹಳ್ಳಿಮನೆ ದಾಬಾ ಮೇಲೆ ದಾಳಿ ಮಾಡಿದ್ದಾರೆ. ದಾಬಾಗಳಲ್ಲಿ ಜಪ್ತಿ ಮಾಡಿರುವ ಒಟ್ಟು 38.16 ಲೀಟರ್ ಶಂಕಿತ ನಕಲಿಮದ್ಯ ಹಾಗೂ 7.8 ಲೀಟರ್ ಬಿಯರ್ ವಶಪಡಿಸಿಕೊಂಡು 4 ಜನ ಆರೋಪಿತರನ್ನು ಬಂಧಿಸಿದ್ದಾರೆ. ಪ್ರತ್ಯೇಕ ಎರಡು ಘಟನೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಇನ್ನು ಇಂಪೀರಿಯಲ್ ಬ್ಲ್ಯೂ ಬ್ರಾಂಡ್ ಹೆಸರಿನಲ್ಲಿ ನಕಲಿ ಮದ್ಯ ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisment -

Most Popular

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ ಹಿರೇಮಠ ನೇಮಕ

ಬೆಂಗಳೂರು : ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ್ ಹಿರೇಮಠ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್​.ಎಂ.ರೇವಣ್ಣ, ಶಾಸಕ...

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

Recent Comments