ಕಾಡ್ಗಿಚ್ಚು ಶಮನಕ್ಕೆ ಕೈ ಜೋಡಿಸಲು ದರ್ಶನ್ ಕರೆ

0
243

ಬೆಂಗಳೂರು: ಬಂಡೀಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿರುವ ಕುರಿತು ಅರಣ್ಯ ಇಲಾಖೆಯ ರಾಜಭಾರಿ ನಟ ದರ್ಶನ್ ಅವರು ಟ್ವೀಟ್​ ಮಾಡಿದ್ದಾರೆ. 

“ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ” ಅಂತ ದರ್ಶನ್​ ಅವರು ಟ್ವೀಟ್​ ಮಾಡಿದ್ದಾರೆ. ಈ ಮೂಲಕ ಬೆಂಕಿ ನಂದಿಸುವ ಕಾರ್ಯದಲ್ಲಿ ಕೈ ಜೋಡಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ ಕಾಳ್ಗಿಚ್ಚು ಸಂಭವಿಸಿದ್ದು5 ಸಾವಿರ ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿದೆ. ಶನಿವಾರ ಹುಲಿ ಸಂರಕ್ಷಿತ ಪ್ರದೇಶಕ್ಕೂ ಬೆಂಕಿ ಹರಡಿತ್ತು. ಗಾಳಿ ಹೆಚ್ಚಾಗಿ ಬೆಂಕಿ ವೇಗದಲ್ಲಿ ಹರಡಿದ್ದು ಬೆಂಕಿ ನಂದಿಸಲು ಸಿಬ್ಬಂದಿ ಸಾಹಸ ಪಡುತ್ತಿದ್ದಾರೆ.

LEAVE A REPLY

Please enter your comment!
Please enter your name here