Home ರಾಜ್ಯ ಬೆಂಗಳೂರು 'ತೌಕ್ತೆ' ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಕಳೆದ ಎರಡು ದಿನದಿಂದ ವಿದ್ಯುತ್ ಕೈ ಕೊಟ್ಟಿದೆ. ಇದೀಗ ಕತ್ತಲಲ್ಲಿರುವ ಜಿಲ್ಲೆಗೆ ಬೆಳಕು ಹರಿಸಲು ಹೆಸ್ಕಾಂ ಸಿಬ್ಬಂದಿ‌ ಹಗಲಿರುಳು ಶ್ರಮಿಸುತ್ತಿದ್ದಾರೆ.
ಕಳೆದ ಮೂರು ದಿನದಿಂದ ಅಬ್ಬರಿಸುತ್ತಿದ್ದ ತೌಕ್ತೆ ಚಂಡಮಾರುತದಿಂದ ಎಲ್ಲೆಡೆಯೂ ಸಮಸ್ಯೆಗಳ ಮೇಲೆ ಸಮಸ್ಯೆ ಸೃಷ್ಟಿಯಾಗಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರದಿಂದ ಅದೆಷ್ಟೊ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ, ಇನ್ನೊಂದೆಡೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಗೆ ಅದೆಷ್ಟೋ ಮರಗಿಡಗಳು ಬುಡಮೇಲಾಗಿವೆ. ವಿದ್ಯುತ್ ಕಂಬಗಳು, ಟ್ರಾನ್ಸಫಾರ್ಮರ್ ಗಳು ಧರೆಗುರುಳಿದ್ದು, ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಕಳೆದ ಎರಡು ದಿನಗಳ ಹಿಂದೆ ಕೈಕೊಟ್ಟಿದ್ದ ವಿದ್ಯುತ್ ಈ ವರೆಗೂ ಬಂದಿಲ್ಲ. ಎಲ್ಲೆಡೆಯೂ ವಿದ್ಯುತ್  ಇಲ್ಲದೇ ಬಹುದೊಡ್ಡ ಸಮಸ್ಯೆ ಸೃಷ್ಟಿಯಾಗಿದೆ. ಮನೆಗಳಲ್ಲಿ ನೀರಿಲ್ಲದೆ ಜನ ಪರದಾಡಬೇಕಾಗಿದೆ. ಮೊಬೈಲ್ ಗಳು ಸ್ವಿಚ್ ಆಫ್ ಆಗಿವೆ. ಮನೆಗಳಲ್ಲಿ ಯುಪಿಎಸ್ ಕೂಡ ಬಂದ್ ಆಗಿದ್ದು ಜನ ಕಂಗಾಲಾಗಿದ್ದಾರೆ. ಇಷ್ಟಾದರೂ ಕೂಡಜನ ತಾಳ್ಮೆಯಿಂದಲೇ ಬೆಳಕಿಗೆ ಎದುರು ನೋಡುತ್ತಿದ್ದಾರೆ.
ಇದಲ್ಲದೆ ಎಲ್ಲೆಡೆಯೂ ಕಂಬಗಳನ್ನು ಹಾಕಿ ಲೈನ್ ಜೋಡಣೆಯಲ್ಲಿ ಮಳೆ ಗಾಳಿ ಎನ್ನದೆ ಕತ್ತಲಲ್ಲಿ ಕಾಲ ಕಳೆಯುತ್ತಿರುವ ಜನತೆಗೆ ವಿದ್ಯುತ್ ಪೂರೈಸಲು ಹೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇವರ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಲೇ ಬೇಕು.
ಉದಯ ಬರ್ಗಿ ಪವರ್ ಟಿವಿ

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments