Home ರಾಜ್ಯ ಇತರೆ ಆಗುಂಬೆ ಘಾಟಿಯಲ್ಲಿ ಶಾಶ್ವತ ರಸ್ತೆ ದುರಸ್ತಿ ಕಾರ್ಯ - ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಆಗುಂಬೆ ಘಾಟಿಯಲ್ಲಿ ಶಾಶ್ವತ ರಸ್ತೆ ದುರಸ್ತಿ ಕಾರ್ಯ – ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಆದರೆ ನಿಗದಿತ ಸಮಯದಲ್ಲಿ ಕೆಲಸ ಪೂರ್ಣವಾಗಿಲ್ಲದ್ದರಿಂದ ಮೇ 15ರ ವರೆಗೆ ದುರಸ್ಥಿ ಕಾರ್ಯವನ್ನು ವಿಸ್ತರಿಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದು, ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ. ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್​​​ ಸಿವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು. ಭಾರಿ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಷುರಿ ಬಸ್‌ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ- ಹೊಸಂಗಡಿ-ಸಿದ್ದಾಪುರ- ಕುಂದಾಪುರ-ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಚಾರ ನಿಷೇಧ ಮೇ 1 ರಿಂದ 15 ರವರೆಗೆ ಅಥವಾ ಕಾಮಗಾರಿ ಮುಗಿಯುವ ತನಕ ಜಾರಿಯಲ್ಲಿರುವುದು. ಕಾಮಗಾರಿ ನಡೆಯುವ ವೇಳೆ ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಬದಲಿ ಮಾರ್ಗದೊಂದಿಗೆ ಆಗುಂಬೆಯಲ್ಲಿರುವ ಸರ್ಕಾರಿ ಶಾಲೆ ಮತ್ತು ಎಸ್​​​​ ವಿ ಎಸ್ ಶಾಲೆಗಳಿಗೆ ವಿದ್ಯಾರ್ಥಿಗಳು ಓಡಾಡಬೇಕಾದ ಅವಶ್ಯಕತೆ ಇರುವುದರಿಂದ ಮಿನಿ ಬಸ್‌ಗಳನ್ನು ತೀರ್ಥಹಳ್ಳಿ-ಆಗುಂಬೆ- ಬಿದರಗೋಡು-ಶೃಂಗೇರಿ ಮಾರ್ಗವಾಗಿಯೂ ಮತ್ತು ಸಾಮಾನ್ಯ ಬಸ್‌ಗಳನ್ನು ತೀರ್ಥಹಳ್ಳಿ-ಕಲ್ಮನೆ-ಹೆಗ್ಗೋಡು- ರಾಮಕೃಷ್ಣಾಪುರ- ಕಮ್ಮರಡಿ-ಶೃಂಗೇರಿ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments