ಕೊಪ್ಪಳ: ಸ್ವಾತಂತ್ರ್ಯ ಹೋರಾಟಗಾರರಾದ ಸರ್ದಾರ್ ವಲ್ಲಭಭಾಯ್ ಪಟೇಲ್ ಹಾಗೂ ಸುಭಾಷಚಂದ್ರ ಬೋಸ್ ಉಗ್ರವಾದಿಗಳಂತಿದ್ರು ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕುಷ್ಟಗಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ವೇಳೆ ಗಾಂಧೀಜಿಯವರು ಅಹಿಂಸಾತ್ಮಕ ಹೋರಾಟ ಮಾಡಿದ್ದಾರೆ. ಆದರೆ ಸರ್ದಾರ್ ವಲ್ಲಭಭಾಯ್ ಪಟೇಲ್ ಹಾಗೂ ಸುಭಾಷ್ಚಂದ್ರ ಬೋಸ್ ಉಗ್ರವಾದಿಗಳಂತೆ ಹಿಂಸಾತ್ಮಕ ಹೋರಾಟ ನಡೆಸಿದ್ದಾರೆ. ಇನ್ನು ಕೊನೆಗೆ ಕಾಂಗ್ರೆಸ್ ಸೇರಿದ್ದ ಪಟೇಲ್ರವರ ದೊಡ್ಡ ಮೂರ್ತಿಯನ್ನು ನಿರ್ಮಿಸಿ ಬಿಜೆಪಿಯವರು ತಮ್ಮವರು ಎಂಬಂತೆ ಬಿಂಬಿಸುತ್ತಿದ್ದಾರೆ. ಯುವಜನರಲ್ಲೂ ವಿಷಬೀಜವನ್ನು ಬಿತ್ತುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.