Home ರಾಜ್ಯ ಪಯಣ ಮುಗಿಸಿದ 'ಅಂಬಿ'ಗನ ಕೊನೆಯ ಪತ್ರ..!

ಪಯಣ ಮುಗಿಸಿದ ‘ಅಂಬಿ’ಗನ ಕೊನೆಯ ಪತ್ರ..!

ಸಹೃದಯಿ ನಟ, ರಾಜಕಾರಣಿ ಅಂಬರೀಶ್ ನಮ್ಮನ್ನೆಲ್ಲಾ ಅಗಲಿದ್ದಾರೆ. ಅಂಬಿ ಇನ್ನು ನೆನಪು ಮಾತ್ರ. ಲೆಕ್ಕವಿಲ್ಲದಷ್ಟು ನೆನಪುಗಳನ್ನು ಬಿಟ್ಟು ಅಂಬಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಇಹಲೋಕದ ಯಾತ್ರೆ ಮುಗಿಸಿದ ‘ಅಂಬಿ’ಗನ ಕೊನೆಯ ಪತ್ರ ಇಲ್ಲಿದೆ.
‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಕ್ಕೆ ಅಂಬಿ ಬರೆದ ಪತ್ರ ಇಲ್ಲಿದೆ.

ಎಲ್ರಿಗೂ ನಮಸ್ಕಾರ ಇದೇನಪ್ಪಾ , ಅಂಬರೀಶ್ ಅವ್ರು ನಮಸ್ಕಾರ -ನಮಸ್ಕಾರ ಅಂತ ಹೇಳ್ತಾ ಇದ್ದಾರೆ. ಅವ್ರಿಗೆ ವಯಸ್ಸಾಯ್ತು ಅಂತಾ ಅಂದ್ಕೋಬೇಡಿ. ತುಂಬಾ ವರ್ಷಗಳ ನಂತರ ನಿಮ್ಮನ್ನೆಲ್ಲ ಈ ಪತ್ರದ ಮುಖಾಂತರ ಮಾತಾಡ್ಸ್ಬೇಕು ಅನ್ನಿಸ್ತು, ಅದಕ್ಕೆ ಒಂದು ಕಾರಣ ಇದೆ.

ಹುಟ್ಟಿದ್ದು ಮಂಡ್ಯ, ಕುಡಿದಿದ್ದು ಕಾವೇರಿ ನೀರು ಅನ್ನೋ ಹಾಗೇ , ಹುಟ್ಟಿದಾಗ ಅಮರ್ ನಾಥ್ ಆಗಿದ್ದ ನಾನು ಬೆಳಿತಾ ಬೆಳಿತಾ ನಿಮ್ಮ ಅಂಬರೀಶ್ ಆದೆ. ಪುಟ್ಟಣ್ಣನ ಜಲೀಲನ ಪಾತ್ರ ಮಾಡ್ತಾ ಮಾಡ್ತಾ ನನಗೇ ಗೊತ್ತಿಲ್ಲದ ನನ್ನೊಳಗೆ ಒಬ್ಬ ಪರಿಪೂರ್ಣ ಕಲಾವಿದ ಬೆಳಿತಾ ಹೋದ, ಹಿಂದಿನ 45 ವರ್ಷಗಳ ಕಾಲ ನೀವು ನನ್ನ ಮೇಲಿಟ್ಟ ಪ್ರೀತಿ, ಅಭಿಮಾನದಿಂದ ನೀವು ನನಗೆ ಕೊಟ್ಟ ಬಿರುದು ‘ರೆಬಲ್ ಸ್ಟಾರ್’.
ಇಷ್ಟಪಟ್ಟ ಹುಡುಗಿ ಜೊತೆ ಮುಂದೆ ಮದುವೆ ಆಯ್ತು. ಮುದ್ದಾದ ಮಗ ಕೂಡ ಹುಟ್ಟಿದ.
ಜೀವನ ನಿಧಾನವಾಗಿ ರಾಜಕೀಯದ ಕಡೆಗೆ ಹರೀತು. ಜನಸೇವೆಯನ್ನು ಮಾಡ್ತಾ ಬಂದೆ. ಸಿನಿಮಾ ನಟನೆಯನ್ನೇನು ಬಿಟ್ಟಿರಲಿಲ್ಲ. ಚಿತ್ರರಂಗದ ಆತ್ಮೀಯರು, ಹಿತೈಷಿಗಳು, ಸ್ನೇಹಿತರ, ಒತ್ತಾಯಕ್ಕೆ, ಪ್ರೀತಿಗೆ ಸೋತು ಅಲ್ಲೊಂದು ಇಲ್ಲೊಂದು ಪಾತ್ರಗಳನ್ನು ಮಾಡ್ತಾ ಇದ್ದೆ.‌ ಸಂತೋಷದ ಜೀವನ ಸಾಗ್ತಾ ಬಂತು. ಯಾವಾಗ ಅನಾರೋಗ್ಯದಿಂದ ಆಸ್ಪತ್ರೇಲಿ ಇದ್ದೆ ಆಗ ನನ್ನೊಳಗಿನ ಕಲೆ ಹಾಗೇ ಇತ್ತು‌‌. ಮಾತನಾಡಲು ಶುರುಮಾಡಿದೆ. ಆಗ ಹುಟ್ಟಿಕೊಂಡಿದ್ದೆ ಈ‌ ಚಡಪಡಿಕೆ. ಈ ಹಂತದಲ್ಲಿ ಜೊತೆಯಾದವನು ಮಗನಂತಹ ಗೆಳೆಯ ‘ಸುದೀಪ’.
ಇನ್ನೇನು ಇಬ್ಬರು ಸೇರಿಕೊಂಡು ನಿಮ್ಮ ಇಡೀ ಕುಟುಂಬದ ಜೊತೆ ಕುಳಿತು ನೋಡುಚ ಚಿತ್ರ ಮಾಡುವುದಾಗಿ‌ ನಿಶ್ಚಯ ಮಾಡಿದ್ದೀವಿ‌. ಇನ್ನೇನು ತಡ ಇಲ್ಲ, ಆದಷ್ಟು ಬೇಗ..
‌‌‌                                                                                                    ಇಂತಿ ನಿಮ್ಮ ಪ್ರಿತಿಯಾ..
                                                                                                           ಅಂಬಿ

ಡಾ.ರಾಜ್ ಸಮಾಧಿ ಬಳಿ ಅಂಬಿ ಅಂತ್ಯಕ್ರಿಯೆ

ರಾಜ್ಯದ ಪಾಲಿಗೆ ಕರಾಳ ದಿನ – ಡಾ.ಜಿ ಪರಮೇಶ್ವರ್

ಅಂಬರೀಶ್ ಅವರನ್ನು ಕಳೆದುಕೊಂಡ ಕರ್ನಾಟಕ ಬಡವಾಗಿದೆ : ಬಿಎಸ್ ವೈ

ಅಂಬರೀಶ್ ಅಜಾತಶತ್ರು -ಸಿದ್ದರಾಮಯ್ಯ

ಅಂಬರೀಶ್ ಅವರ ಅಗಲಿಕೆ ಆಘಾತವನ್ನುಂಟು ಮಾಡಿದೆ : ಎಚ್.ಡಿ ದೇವೇಗೌಡ್ರು

ಅಪ್ಪಾಜಿಯನ್ನು ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲಾಗ್ತಿಲ್ಲ – ದರ್ಶನ್

ಹುಸಿ ಕೋಪದಿಂದಲೇ ಪ್ರೀತಿ ಸಂಪಾದಿಸಿದ್ದ ಎಲ್ಲರ ಅಣ್ಣ ಅಂಬಿ – ಡಿ.ವಿ ಸದಾನಂದ ಗೌಡ

ಅಂಬರೀಶ್ ನಿಧನಕ್ಕೆ ರಜನಿಕಾಂತ್ ಸಂತಾಪ

ರೆಬಲ್ ಸ್ಟಾರ್ ಅಂಬರೀಶ್ ವಿಧಿವಶ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments