ಬಾಹುಬಲಿ ಅವತಾರದಲ್ಲಿ ಡೊನಾಲ್ಡ್ ಟ್ರಂಪ್!

0
332

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24 ರಂದು ಭಾರತಕ್ಕೆ ಭೇಟಿ ನೀಡುವ ಹಿನ್ನೆಲೆ ಟ್ವಿಟ್ಟರ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಭಾರತದ ಸ್ನೇಹಿತರ ಜೊತೆ ಇರಲು ನಾನು ಕಾತುರದಿಂದ ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Sol ಎಂಬ ಖಾತೆಯಿಂದ ಪೋಸ್ಟ್ ಮಾಡಿದ್ದ ವಿಡಿಯೋವನ್ನು ಟ್ರಂಪ್ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ವಿಡೀಯೋದಲ್ಲಿ ಪ್ರಭಾಸ್ ನಟನೆಯ ಬಾಹುಬಲಿ ಸಿನಿಮಾದ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ಅದರಲ್ಲಿ ಡೊನಾಲ್ಡ್ ಟ್ರಂಪ್, ಇವಾಂಕ ಟ್ರಂಪ್, ಮೆಲೇನಿಯಾ ಟ್ರಂಪ್ ಮಾತ್ರವಲ್ಲದೆ ಪ್ರಧಾನಿ ಮೋದಿ ಹಾಗೂ ಜಶೋಧಾ ಬೆನ್ ಅವರ ಮುಖವನ್ನೂ ಎಡಿಟ್ ಮಾಡಲಾಗಿದೆ.

ಸದ್ಯ ಡೊನಾಲ್ಡ್ ಟ್ರಂಪ್ ಮಾಡಿರುವ ಪೋಸ್ಟ್​ಗೆ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ.

 

LEAVE A REPLY

Please enter your comment!
Please enter your name here