Home ದೇಶ-ವಿದೇಶ ಯಾವ್ದೇ ಕಾರಣಕ್ಕೂ ದೇಶ ಇಬ್ಭಾಗ ಆಗಲು ಬಿಡಲ್ಲ : ಮೋದಿ

ಯಾವ್ದೇ ಕಾರಣಕ್ಕೂ ದೇಶ ಇಬ್ಭಾಗ ಆಗಲು ಬಿಡಲ್ಲ : ಮೋದಿ

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶ ಇಬ್ಭಾಗವಾಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ದೇಶ ಇಬ್ಭಾಗವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಈ ಕಾಯ್ದೆಯಿಂದ ದೇಶ ವಿಭಜನೆಯಾಗುತ್ತದೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದಕ್ಕೆ ಸಂಭಂದಿಸಿದಂತೆ ಟ್ವೀಟ್ ಮಾಡಿ ಮೋದಿ ಸ್ಪಷ್ಟನೆ ನೀಡಿದ್ದಾರೆ .

’’ಸಿಎಎಯಿಂದ ಯಾವುದೇ ಭಾರತೀಯ ಅಥವಾ ಯಾವುದೇ ಧರ್ಮದವರಿಗೆ ತೊಂದರೆಯಾಗುವುದಿಲ್ಲ. ಈ ಆ್ಯಕ್ಟ್ ಬಗ್ಗೆ ಭಾರತೀಯರು ಚಿಂತಿಸುವ ಅಗತ್ಯವಿಲ್ಲ. ಅಲ್ಲದೆ ಬೇರೆ ದೇಶಗಳಲ್ಲಿ ಹಿಂಸೆ ಅನುಭವಿಸಿ, ಭಾರತ ಬಿಟ್ಟು ಬೇರೆಲ್ಲೂ ರಕ್ಷಣೆ ಸಿಗುವುದೇ ಇಲ್ಲ ಎನ್ನುವವರಿಗೆ ಈ ಕಾಯ್ದೆ‘‘ ಎಂದು ಮೋದಿ ತಿಳಿಸಿದ್ದಾರೆ .

ಪ್ರಜಾಪ್ರಭುತ್ವ ಎಂದ ಮೇಲೆ ಒಂದು ವಿಷಯದ ಬಗ್ಗೆ ಚರ್ಚೆ , ವಾದ-ವಿವಾದ ಪ್ರತಿವಾದ ಎಲ್ಲವೂ ಇರತ್ತೆ . ಆದರೆ ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡುವುದು , ಸಾರ್ವಜನಿಕ ಜೀವನಕ್ಕೆ ತೊಂದರೆ ಮಾಡುವುದು ಸಮಂಜಸವಲ್ಲ ಎಂದು ಟ್ವೀಟ್ ಮಾಡಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments