ದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವಿಕರಿಸಲು ಹೊಗಲ್ಲ ಎಂದಿದ್ದಾರೆ. ಈ ಬಗ್ಗೆ ಸ್ವತಃ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತೀಯ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಬಿಗ್ ಬಿ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದಿದೆ.
ದೆಹಲಿಯಲ್ಲಿಂದು ಅವಾರ್ಡ್ ಫಂಕ್ಷನ್ ನಡೆಯಲಿದೆ. ಜ್ವರವಿರುವ ಕಾರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ . ಇದರಿಂದ ಮನಸ್ಸಿಗೆ ಬೇಸರವಾಗಿದೆ ಎಂದು ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.
T 3584/5/6 –
Down with fever .. ! Not allowed to travel .. will not be able to attend National Award tomorrow in Delhi .. so unfortunate .. my regrets ..— Amitabh Bachchan (@SrBachchan) December 22, 2019