Home ರಾಜ್ಯ ಬೆಂಗಳೂರು ‘ರುಪ್ಸಾ ಪ್ರತಿಭಟನೆಯ ವಿರುದ್ಧ ತಿರುಗಿಬಿದ್ದ ಆನೇಕಲ್ ತಾಲ್ಲೂಕು ಖಾಸಗಿ ಶಾಲೆಗಳ ಒಕ್ಕೂಟ’

‘ರುಪ್ಸಾ ಪ್ರತಿಭಟನೆಯ ವಿರುದ್ಧ ತಿರುಗಿಬಿದ್ದ ಆನೇಕಲ್ ತಾಲ್ಲೂಕು ಖಾಸಗಿ ಶಾಲೆಗಳ ಒಕ್ಕೂಟ’

ಆನೇಕಲ್: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಬೆಂಗಳೂರಿನಲ್ಲಿ ರುಪ್ಸಾ ಸಂಘದ ಅಡಿಯಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆಗೆ ಕರೆ ಕೊಟ್ಟಿರುವ ಬೆನ್ನಲ್ಲೇ, ಇದರ ವಿರುದ್ಧ ಆನೇಕಲ್ ತಾಲ್ಲೂಕು ಖಾಸಗಿ ಅನುದಾನಿತ ಶಾಲೆಗಳ ಒಕ್ಕೂಟದ ಸಂಘವು ತಿರುಗಿ ಬಿದ್ದಿದ್ದು, ರುಪ್ಸಾ ಕರೆ ಕೊಟ್ಟಿರುವ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು ಹೊರವಲಯ ಅತ್ತಿಬೆಲೆಯ ಎ.ಪಿ.ಎಸ್ ಶಾಲೆಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆನೇಕಲ್ ತಾಲೂಕು ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಮುನಿರಾಜು ರುಪ್ಸಾ ಸಂಘವು ಎರಡು ತಿಂಗಳ ಹಿಂದಷ್ಟೇ ನೋಂದಣಿ ಮಾಡಿಸಿದ್ದು, ಅವರು ಕರೆ ನೀಡಿರುವ ಖಾಸಗಿ ಶಾಲೆಗಳ ಹಾಗೂ ಶಿಕ್ಷಕರ ಮುಷ್ಕರಕ್ಕೆ ಆನೇಕಲ್ ತಾಲೂಕಿನ ಖಾಸಗಿ ಒಕ್ಕೂಟ ಬೆಂಬಲವಿಲ್ಲ. ರುಪ್ಸಾ ಸಂಘದ ಅಧ್ಯಕ್ಷ ಲೋಕೇಶ್ವರಪ್ಪ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳನ್ನು ಉಪಯೋಗಿಸಿ ಕೊಳ್ಳುತ್ತಿದ್ದಾರೆ. 12 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ಹೊಂದಿದೆ ಎಂದು ಹೇಳಿಕೊಳ್ಳುತ್ತಿರುವುದು ಸತ್ಯಕ್ಕೆ ದೂರವಾದ ಮಾತಾಗಿದೆ. ಕೊರೊನಾದಂತಹ ಸಾಂಕ್ರಾಮಿಕ ರೋಗ ಕಾಲಿಟ್ಟ ಘಳಿಗೆಯಿಂದ ಶಿಕ್ಷಣ ಸಂಸ್ಥೆಗಳು ಬುಡಮೇಲು ಆಗಿರುವ ಸಂದರ್ಭದಲ್ಲಿ ಇಂತಹ ನಿರ್ಣಯಗಳು ಕೈಗೊಳ್ಳುವುದು ಸರಿಯಲ್ಲ, ಸರ್ಕಾರ ನೀಡಿರುವ ನಿರ್ದೇಶನದಂತೆ ಎಸ್.ಓ.ಪಿ ಪ್ರಕಾರ ಶಾಲೆಗಳು ಆರಂಭ ಮಾಡಲಾಗಿದ್ದು, ಇದೀಗ ಖಾಸಗಿ ಶಾಲೆಯವರು ಚೇತರಿಸಿಕೊಳ್ಳುತ್ತಿದ್ದೇವೆ. ಇಂತಹ ಸಂಧರ್ಭದಲ್ಲಿ ಖಾಸಗಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲು ಮುಂದಾಗಿರುವ ರುಪ್ಸಾ ಸಂಘಟನೆಯ ಬಂದ್ಗೆ ನಮ್ಮ ಬೆಂಬಲವಿಲ್ಲ ಎಂದು ತಿಳಿಸಿದರು.

ಇನ್ನೂ ಇದೇ ಸಂದರ್ಭದಲ್ಲಿ ಮಾತನಾಡಿದ ಆನೇಕಲ್ ತಾಲ್ಲೂಕು ಖಾಸಗಿ ಶಾಲೆಗಳ ಸಂಘದ  ಕಾರ್ಯದರ್ಶಿ ಚಂದ್ರಯ್ಯ ನಾಯ್ಡು, ಕೊರೋನಾ ಕಡಿಮೆಯಾಗುತ್ತಿರುವ ಈ ಸಂಧರ್ಭದಲ್ಲಿ ಪೋಷಕರು ಮಕ್ಕಳು ಮತ್ತು ಶಿಕ್ಷಕರು ಯಾವಾಗ ಶಾಲೆ ಆರಂಭವಾಗುತ್ತದೆಂದು ಆತುರದಿಂದ ಕಾದು ಕುಳಿತಿದ್ದರು, ಸರ್ಕಾರ ನಮ್ಮ ಬೆಂಬಲಕ್ಕೆ ನಿಂತು 12ನೇ ತರಗತಿಯವರೆಗೆ ಶಾಲೆ ತೆರೆಯುವಂತೆ ಅವಕಾಶ ಮಾಡಿಕೊಟ್ಟಿದ್ದಾರೆ. ದೇಶ ಅಭಿವೃದ್ಧಿಯಾಗಲು ಶಿಕ್ಷಕರ ಪಾತ್ರ ಬಹಳ ಪ್ರಮುಖವಾದದ್ದು, ರೂಪ್ಸಾ ಸಂಘಟನೆಯವರು ಶಿಕ್ಷಕರನ್ನೇ ದಾರಿತಪ್ಪಿಸಲು ಹೊರಟಿದ್ದಾರೆ. ಇದ್ಯಾವುದಕ್ಕೂ ನಾವು ಕಿವಿಗೊಡುವುದಿಲ್ಲ. ಅವರು ಕರೆ ನೀಡಿರುವ ಹೋರಾಟಕ್ಕೆ ನಮ್ಮ ಆನೇಕಲ್ ತಾಲೂಕಿನ ಖಾಸಗಿ ಶಾಲೆ ಶಿಕ್ಷಕರ ಬೆಂಬಲವಿಲ್ಲ ಜೊತೆಗೆ ರಾಜ್ಯದಾದ್ಯಂತ ಖಾಸಗಿ ಶಾಲೆಗಳು ಕೂಡ ಬೆಂಬಲ ನೀಡುವುದಿಲ್ಲ ಎಂದರು.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments