Home ರಾಜ್ಯ ಎಸ್​.ಎಂ ಕೃಷ್ಣಗೆ ಅವಾಚ್ಯ ಶಬ್ಧ ಬಳಕೆ : ಆಂಜಿನಪ್ಪ ವಿರುದ್ಧ ಎಫ್​​ಐಆರ್

ಎಸ್​.ಎಂ ಕೃಷ್ಣಗೆ ಅವಾಚ್ಯ ಶಬ್ಧ ಬಳಕೆ : ಆಂಜಿನಪ್ಪ ವಿರುದ್ಧ ಎಫ್​​ಐಆರ್

ಚಿಕ್ಕಬಳ್ಳಾಪುರ : ಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ, ಬೈ ಎಲೆಕ್ಷನ್​ನ ಚಿಕ್ಕಬಳ್ಳಾಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ .
ಉಪಚುನಾವಣೆ ಸೋಲುಂಡ ಬಳಿಕ ಸುದ್ದಿಗೋಷ್ಟಿ ನಡೆಸಿದ್ದ ಅವರು, ಕೃಷ್ಣ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿ, ಹಿಂದೆಯೂ ನನಗೆ ಎಸ್.ಎಂ ಕೃಷ್ಣ ಟಿಕೆಟ್ ತಪ್ಪಿಸಿದ್ದರು . ಕಾಂಗ್ರೆಸ್​​​​ನಲ್ಲಿದ್ದು ಅಧಿಕಾರಗಳನ್ನೂ ಅನುಭವಿಸಿ ಈಗ ಪಕ್ಷಕ್ಕೆ ದ್ರೋಹ ಮಾಡಿದರು. ಇಂತಹ ವ್ಯಕ್ತಿಗಳನ್ನು ಬೆಳೆಸಿ ಕಾಂಗ್ರೆಸ್ ಸಂಕಷ್ಟ ಅನುಭವಿಸುತ್ತಿದೆ ಎಂದು ವಾಗ್ದಳಿ ನಡೆಸುವ ಸಂದರ್ಭದಲ್ಲಿ ಅವ್ಯಾಚ್ಯ ಬಳಸಿದ್ದರು. ಇದರ ವಿರುದ್ಧ ಎಸ್. ಎಂ. ಕೃಷ್ಣ ಅಭಿಮಾನಿ ಶಂಕರಪ್ಪ ಚಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಆಂಜಿನಪ್ಪ ವಿರುದ್ಧ ಐಸಿಸಿ ಸೆಕ್ಷನ್ 153,504 ರ ಅಡಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments