ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ಇಂದು ಮತ್ತೆ 12 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾಗಿರುವ ಸೋಂಕಿತರಲ್ಲಿ ಮೈಸೂರಿನಲ್ಲಿ 3 ಪ್ರಕರಣಗಳು ಪತ್ತೆಯಾಗಿದ್ದು, ಮಂಡ್ಯದಲ್ಲಿ 1 ಪ್ರಕರಣ, ಧಾರವಾಡದಲ್ಲಿ 1, ಗದಗ 1, ಬೆಳಗಾವಿ ಹಾಗೂ ವಿಜಯಪುರದಲ್ಲಿ1 ಪ್ರಕರಣ ಪತ್ತೆಯಾಗಿದೆ. ಇನ್ನು ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ತಲಾ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ.