ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದೆ. ಬೆಳಗ್ಗೆ ಬಂದ ವರದಿಯಲ್ಲಿ ಕೇವಲ ಐದು ಕೇಸುಗಳು ಪತ್ತೆಯಾಗಿದ್ದವು. ಆದರೆ ಸಂಜೆ ಬಂದಿರುವ ವರದಿ ಪ್ರಕಾರ ಒಟ್ಟು 18 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಈವರೆಗೆ 408 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅದರಲ್ಲಿ ಇಂದು ಪತ್ತೆಯಾಗಿರುವ ಪ್ರಕರಣದಲ್ಲಿ ಕಲಬುರಗಿಯಲ್ಲಿ 5 ಪ್ರಕರಣ ದಾಖಲಾಗಿದೆ. ಇನ್ನು ವಿಜಯಪುರದಲ್ಲಿ ಗರಿಷ್ಠ ಮಟ್ಟದಲ್ಲಿ ಸೋಂಕಿತರು ಪತ್ತೆಯಾಗಿದ್ದು, ಇಂದು 11 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನುಳಿದಂತೆ ಗದಗದಲ್ಲಿ ಒಬ್ಬರು ಹಾಗೂ ಬೀದರ್ನಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.