Home ದೇಶ-ವಿದೇಶ ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿದೆ ಕೊರೋನಾ : ಸೋಂಕಿತರ ಸಂಖ್ಯೆ 39 ಲಕ್ಷಕ್ಕೇರಿಕೆ

ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿದೆ ಕೊರೋನಾ : ಸೋಂಕಿತರ ಸಂಖ್ಯೆ 39 ಲಕ್ಷಕ್ಕೇರಿಕೆ

ನವದೆಹಲಿ: ಜಗತ್ತಿನಾದ್ಯಂತ ಕೋವಿಡ್-19 ತನ್ನ ಕದಂಬಬಾಹು ಚಾಚುತ್ತಲೇ ಇದೆ. ಕೇವಲ 24 ಗಂಟೆಯಲ್ಲಿ 96,262 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈವರೆಗೆ ಒಟ್ಟು  39,13,644 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಸಾವಿನ ಸಂಖ್ಯೆಯೂ ಏರುತ್ತಿದ್ದು, ಒಂದೇ ದಿನದಲ್ಲಿ 5,589 ಜನ  ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 2,70,426 ಮಂದಿ ಸೋಂಕಿತರು  ಮೃತಪಟ್ಟಿದ್ದಾರೆ. ಇದರ ನಡುವೆ ಗುಣಮುಖರಾದವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಈವರೆಗೆ 13,40,428 ಜನ ಸಾವನ್ನಪ್ಪಿದ್ದಾರೆ.

ಜಗತ್ತಿನ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಅಮೆರಿಕಾದಲ್ಲಿ 29,531 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಒಟ್ಟು 12,92,623 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೆ ಅಮೇರಿಕಾದಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ 76,928 ಕ್ಕೇರಿಕೆಯಾಗಿದ್ದು, ಒಂದೇ ದಿನದಲ್ಲಿ 2,129 ರಷ್ಟು ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಎರಡನೇ ಸ್ಥಾನದಲ್ಲಿರುವ ಸ್ಪೇನ್​ನಲ್ಲಿ 2,56,855 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಒಂದು ದಿನದಲ್ಲಿ 3,173 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಮೃತಪಟ್ಟವರ ಸಂಖ್ಯೆಯೂ 26,070 ಕ್ಕೇರಿಕೆಯಾಗಿದೆ. ಇನ್ನು ಇಟಲಿಯಲ್ಲಿ ಒಟ್ಟು 2,56,858 ಮಂದಿಯಲ್ಲಿ ಸೋಂಕು ದೃಢಪಟ್ಟ್ಟಿದ್ದು, ನಿನ್ನೆಯಿಂದ ಇಂದಿಗೆ 1,401 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ 29,958 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಂದೇ ದಿನದಲ್ಲಿ 3,390 ಮಂದಿಗೆ ಸೋಂಕು ಹರಡಿದ್ದು ಸೋಂಕಿತರ ಸಂಖ್ಯೆ 56,342 ಕ್ಕೆ ಏರಿದೆ. ಇನ್ನು ಇಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ ಏರಿಕೆಯಾಗಿದ್ದು, ಈವರೆಗೆ ಒಟ್ಟು 1,886 ಜನ ಸೋಂಕಿತರು ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments