ಜಗತ್ತಿನಾದ್ಯಂತ 40 ಲಕ್ಷದ ಗಡಿ ದಾಟಿದ ಸೋಂಕಿತರ ಸಂಖ್ಯೆ : ಕೇವಲ 24 ಗಂಟೆಯಲ್ಲಿ 5,500ಕ್ಕೂ ಅಧಿಕ ಮಂದಿ ಸಾವು

0
270

ನವದೆಹಲಿ: ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೋವಿಡ್-19 ಗೆ ಕೇವಲ 24 ಗಂಟೆಯಲ್ಲಿ 5,500ಕ್ಕೂ ಹೆಚ್ಚು ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು ಜಗತ್ತಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 2,75,976 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಒಟ್ಟು 40,09,291 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕೇವಲ 24 ಗಂಟೆಯಲ್ಲಿ ಸೋಂಕು 97,128 ಜನರಿಗೆ ಸೋಂಕು ಹರಡಿದೆ. ಇವೆಲ್ಲದರ ನಡುವೆ ಸೋಂಕಿ ನಿಂದ 13,81,778 ಮಂದಿಗೆ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಗತ್ತಿನ ದೊಡ್ಡಣ್ಣ ಅಮೆರಿಕಾವನ್ನು ಮಹಾಮಾರಿ ಬಿಡದೇ ಕಾಡುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ  ಕೇವಲ 24 ಗಂಟೆಯಲ್ಲಿ 29,162 ರಷ್ಟು ಏರಿಕೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,21,785 ಏರಿಕೆಯಾಗಿದೆ. ಇನ್ನು ಅಮೆರಿಕಾದಲ್ಲಿ ಈವರೆಗೆ 2,23,603  ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಗತ್ತಿನ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾ ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಸ್ಪೇನ್ ಇದೆ. 2,60,117 ಮಂದಿ ಸೋಂಕಿತರು ಈವರೆಗೆ ಸ್ಪೇನ್​ನಲ್ಲಿ ಪತ್ತೆಯಾಗಿದ್ದು, ಒಂದೇ ದಿನದಲ್ಲಿ 3,262 ಜನರಿಗೆ ಸೋಂಕು ಹರಡಿರುತ್ತದೆ. ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 26 ಸಾವಿರದ ಗಡಿ ದಾಟಿದೆ.ಈ ಮಧ್ಯೆ ಸೋಂಕಿನಿಂದ 1,68,408 ಮಂದಿ ಗುಣಮುಖರಾಗಿದ್ದಾರೆ.

ಇಟಲಿಯಲ್ಲಿ  ಸೋಂಕಿಗೆ ತುತ್ತಾದವರ ಸಂಖ್ಯೆ  2,17,185 ಕ್ಕೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 1,327 ಜನರಿಗೆ ಸೋಂಕು ಹರಡಿದೆ. ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯು ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆಯೂ 30 ಸಾವಿರದ ಗಡಿ ದಾಟಿದೆ. ಇಲ್ಲಿ ಗುಣಮುಖರಾದವರ ಸಂಖ್ಯೆಯೂ ಏರಿಕೆಯಾಗಿದ್ದು, 99,023 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

LEAVE A REPLY

Please enter your comment!
Please enter your name here