Home ರಾಜ್ಯ ಜ. 26 ರಂದು ಪರ್ಯಾಯ ರೈತ ಗಣರಾಜ್ಯೋತ್ಸವ ಪರೆಡ್: ಶಾಂತಕುಮಾರ

ಜ. 26 ರಂದು ಪರ್ಯಾಯ ರೈತ ಗಣರಾಜ್ಯೋತ್ಸವ ಪರೆಡ್: ಶಾಂತಕುಮಾರ

ಹುಬ್ಬಳ್ಳಿ : ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 26 ರಂದು ರೈತರ ಪರ್ಯಾಯ ಗಣರಾಜ್ಯೋತ್ಸವ ಪರೆಡ್ ಹಮ್ಮಿಕೊಳ್ಳಲಾಗಿದೆ. ಅಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ , ಮೋಟಾರ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 52 ದಿನಗಳಿಂದ ರೈತರು  ಹೋರಾಟ ಮಾಡಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರಗೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ. ರೈತರ ಬಗ್ಗೆ ಕಾಳಜಿ ಇಲ್ಲ. ಪ್ರಜಾಪ್ರಭುತ್ವ ವಿರೋಧಿ ಕೃಷಿ ಕಾಯ್ದೆ ಜಾರಿಗೆ ತರಲಾಗಿದೆ. ಚಳವಳಿ ಹತ್ತಿಕ್ಕಲು ವಾಮಮಾರ್ಗ ಅನುಸರಿಸುತ್ತಿದೆ. ಆದರೆ ಯಾವುದೇ ವಾಮಮಾರ್ಗಕ್ಕೆ ರೈತರು ಬಗ್ಗುವುದಿಲ್ಲ ಎಂದು ಎಚ್ಚರಿಕೆ ‌ನೀಡಿದರು.

ಜ. 26 ರಂದು ಪರ್ಯಾಯ ಗಣರಾಜೋತ್ಸವ ಪರೆಡ್ ದೇಶದ ಉದ್ದಗಲಕ್ಕೂ ಮಾಡಲಾಗುತ್ತಿದೆ. ಅಂದು ಬೆಂಗಳೂರಿನಲ್ಲಿಯೂ ಬೃಹತ್ ಸಂಖ್ಯೆಯಲ್ಲಿ ಟ್ರ್ಯಾಕ್ಟರ್, ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ರಾಜ್ಯ ಸಮಿತಿ ಸಭೆ ಕರೆದು ಚರ್ಚಿಸಿದ್ದು, 15 ಸಾವಿರಕ್ಕೂ ಹೆಚ್ಚು ವಾಹನಗಳು ಭಾಗಿಯಾಗಲಿದ್ದು, ಎಲ್ಲಾ ಸಂಘಟನೆಗಳು ಸ್ವಯಂಪ್ರೇರಿತವಾಗಿ ಭಾಗಿಯಾಗಲಿವೆ ಎಂದರು.

LEAVE A REPLY

Please enter your comment!
Please enter your name here

- Advertisment -

Most Popular

‘ಮನೆ ಮಾಲೀಕನನ್ನು ರಕ್ಷಿಸಿ ಸಾವಿಗೆ ಶರಣಾದ ಶ್ವಾನ’

ವಿಜಯಪುರ: ಶ್ವಾನ ಮನುಷ್ಯನ ಅತಿ ನಿಯತ್ತಿನ ಪ್ರಾಣಿ, ತನ್ನನು ಸಾಕಿದ ಯಜಮಾನನ ಮಾನ ಪ್ರಾಣ ಉಳಿಸಲು ಜೀವವನ್ನೇ ಪಣಕ್ಕಿಟ್ಟಿರುವ ಸಾವಿರಾರು ಪ್ರಕರಣ ದೇಶದಲ್ಲಿ‌ನಡೆದು ಹೋಗಿವೆ. ಅಂತದೇ ಒಂದು ಪ್ರಕರಣ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ...

‘ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಬರಬಹುದು’ : ಶಶಿಕಲಾ ಜೊಲ್ಲೆ

ಬೆಂಗಳೂರು : ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಅಥವಾ ಅಪಘಾತದಿಂದಲೂ ಬರಬಹುದು.ಬಂದ ಮೇಲೆ ಕುಗ್ಗದೆ ಧೈರ್ಯವಾಗಿ ಎದುರಿಸಿ ಸಾಧನೆಯ ಮೆಟ್ಟಿಲನ್ನು ಏರಬೇಕಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಚಿವೆ ಶಶಿಕಲಾ ಜೊಲ್ಲೆ ಎಂದು ಹೇಳಿದರು. ಬೆಂಗಳೂರು...

ಕೋರ್ಟ್ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ !

ವಿಜಯನಗರ (ಹೊಸಪೇಟೆ) : ಕೋರ್ಟ್ ಆವರಣದಲ್ಲೇ ವಕೀಲನೋರ್ವನ ಬರ್ಬರ ಹತ್ಯೆಯಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ಘಟನೆ ನಡೆದಿದೆ. ಡಾ. ತಾರಿಹಳ್ಳಿ ವೆಂಕಟೇಶ್ ಎನ್ನುವವರನ್ನ ಮನೋಜ್ ಎಂಬ ಯುವಕ (22) ಮಚ್ಚಿನಿಂದ...

ಬಾಲಕನ ಮೇಲೆ ಪೈಶಾಚಿಕ ಕೃತ್ಯ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಕಗ್ಗೊಲೆ

ಕಲಬುರಗಿ/ಜೇವರ್ಗಿ : ಅನ್ಯ ಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ 14 ವರ್ಷದ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ಮಹೇಶ್ ಎಂಬ...

Recent Comments