Home ಸಿನಿ ಪವರ್ ಪುನೀತ್, ದರ್ಶನ್, ಸುದೀಪ್, ಯಶ್​ ಜೊತೆ ನಟಿಸ್ತಾರಾ ಆಶಿಕಾ ರಂಗನಾಥ್?

ಪುನೀತ್, ದರ್ಶನ್, ಸುದೀಪ್, ಯಶ್​ ಜೊತೆ ನಟಿಸ್ತಾರಾ ಆಶಿಕಾ ರಂಗನಾಥ್?

ಆಶಿಕಾ ರಂಗನಾಥ್.. ಸ್ಯಾಂಡಲ್​ವುಡ್​​ನ ಬಹು ಬೇಡಿಕೆ ನಟಿಯರಲ್ಲೊಬ್ಬರು. 2016ರಲ್ಲಿ ಕ್ರೇಜಿಬಾಯ್ ಸಿನಿಮಾ ಮೂಲಕ ಸಿನಿ ಜರ್ನಿ ಆರಂಭಿಸಿದ ತುಮಕೂರು ಬೆಡಗಿ ಆಶಿಕಾ ಅಲ್ಲಿಂದ ಹಂತ ಹಂತವಾಗಿ ಚಿತ್ರರಂಗದಲ್ಲಿ ನೆಲೆ ನಿಲ್ಲುತ್ತಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್​​ಕುಮಾರ್ ಅಭಿನಯದ ಮಾಸ್ ಲೀಡರ್, ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಮುಗುಳು ನಗೆ’, ಶರಣ್ ನಟನೆಯ ರ್ಯಾಂಬೋ 2. ರಾಜು ಕನ್ನಡ ಮೀಡಿಯಂ, ತಾಯಿಗೆ ತಕ್ಕಮಗ ಸಿನಿಮಾಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಇವರು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್, ರಾಕಿಂಗ್ ಸ್ಟಾರ್ ಯಶ್ ಜೊತೆ ಒಂದೇ ಒಂದು ಸಿನಿಮಾದಲ್ಲಿ ನಟಿಸಿಲ್ಲ. ಆಶಿಕಾ ಯಾವಾಗ ಈ ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಾರೆ ಅನ್ನೋ ಕುತೂಹಲ ಪ್ರತಿಯೊಬ್ಬ ಅಭಿಮಾನಿಗಳದ್ದು. ಅಂತೆಯೇ ಲಿಖಿತ್ ಶೆಟ್ಟಿ ಎಂಬ ಅಭಿಮಾನಿ ‘ಪವರ್​ ಸ್ಟಾರ್, ಚಾಲೆಂಜಿಂಗ್​ ಸ್ಟಾರ್, ಸುದೀಪ್ ಸರ್, ರಾಕಿಂಗ್​ ಸ್ಟಾರಂತಹ ನಟರ ಜೊತೆ ಯಾವಾಗ ನಟಿಸ್ತೀರಾಅಂತ ಟ್ವೀಟ್ ಮೂಲಕ ಪ್ರಶ್ಮಿಸಿದ್ದು ಅದಕ್ಕೆ ಆಶಿಕಾ ನಾನು ಕೂಡ ಅದನ್ನೇ ಬಯಸುತ್ತೇನೆ. ಆದಷ್ಟು ಬೇಗ ಆಗುತ್ತೆ ಅಂತ ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments