Sunday, June 26, 2022
Powertv Logo
Homeದೇಶಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ ಮೂವರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ ಮೂವರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಜಲಾಲಾಬಾದ್ : ಅಫ್ಘಾನಿಸ್ತಾನದ ನಂಗರ್ಹಾರ್ ಪ್ರಾಂತ್ಯದಲ್ಲಿರುವ ಸ್ಪಿನ್ ಘರ್ ಪ್ರದೇಶದಲ್ಲಿರುವ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಭಾರೀ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಸ್ಥಳೀಯ ಮುಲ್ಲಾ ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 1.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಮಸೀದಿಯ ಒಳಭಾಗದಲ್ಲಿ ಸ್ಫೋಟಕಗಳು ಸ್ಫೋಟಿಸಿದ್ದರಿಂದ ಈ ಘಟನೆ ನಡೆದಿದೆ.

ವಾರದ ಪ್ರಾರ್ಥನೆಗಾಗಿ ಮಸೀದಿಗೆ ಆಗಮಿಸಿದವರನ್ನು ಗುರಿಯಾಗಿಸಿ ಮಸೀದಿ ಮೇಲೆ ದಾಳಿ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ರೀತಿಯ ದಾಳಿಗಳು ಅಲ್ಲಿ ಸರ್ವೆ ಸಾಮನ್ಯವಾಗಿ ಹೋಗಿವೆ. ನಿನ್ನೆ ನಡೆದ ಮಸೀದಿಯ ಸ್ಫೋಟದ ಬಗ್ಗೆ ತಾಲಿಬಾನ್ ನಾಯಕರು ಕೂಡ ಖಚಿತಪಡಿಸಿದ್ದಾರೆ. ಸ್ಪಿನ್ ಘರ್ ಜಿಲ್ಲೆಯ ಮಸೀದಿಯಲ್ಲಿ ನಮಾಜ್ ವೇಳೆ ನಡೆದ ಸ್ಫೋಟದಿಂದ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಇದುವರೆಗೂ ಮೂವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಫ್ಪಿಗೆ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಏನು ಹೇಳಲು ಸಾಧ್ಯವಿಲ್ಲ ಎಂದು ವೈದರು ತಿಳಿಸಿದ್ದಾರೆ.

ಈ ಹಿಂದೆ ಅಕ್ಟೋಬರ್ 15ರಂದು ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿ 16 ಜನ ಸಾವನ್ನಪ್ಪಿದ್ರು, 100 ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದವು. ಮಸೀದಿಯಲ್ಲಿ ರಕ್ತದ ಮಡುವಿನಲ್ಲಿ ನೂರಾರು ಹೆಣಗಳ ರಾಶಿ ಬಿದ್ದಿದ್ದವು. ಅದರ ಬೆನ್ನಲ್ಲೇ ಅಫ್ಘಾನ್ನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಪ್ರಾರ್ಥನೆ ಮಾಡುತ್ತಿದ್ದ ಮೂವರ ಪ್ರಾಣಪಕ್ಷಿ ಹಾರಿಹೋಗಿದೆ. ಶುಕ್ರವಾರ ನಮಾಜ್ ಮಾಡಲು ಅಧಿಕ ಸಂಖ್ಯೆಯಲ್ಲಿ ಜನ ಮಸೀದಿಗೆ ಬಂದಿದ್ದರು. ಸ್ಫೋಟವಾಗುತ್ತಿದ್ದಂತೆ ಅಲ್ಲಿದ್ದ ಜನರು ಕೂಡಲೇ ಹೊರಬಂದಿದ್ದಾರೆ. ಏನಾಗುತ್ತಿದೆ ಅನ್ನುವಷ್ಟರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಾಳುಗಳನ್ನ ಕೂಡಲೇ ಆಸ್ಪತ್ರೆಗೆ ಸೇರಿಸಲಾಯ್ತು.

2 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments