Friday, October 7, 2022
Powertv Logo
Homeದೇಶನಾಳೆ ತನ್ನ ಗುರುವಿನ ಪ್ರತಿಮೆ ಅನಾವರಣ ಮಾಡಲಿದ್ದಾರೆ ಮೋದಿ!

ನಾಳೆ ತನ್ನ ಗುರುವಿನ ಪ್ರತಿಮೆ ಅನಾವರಣ ಮಾಡಲಿದ್ದಾರೆ ಮೋದಿ!

ಲಕ್ನೋ :  ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿರ್ಮಾಣವಾಗಿರುವ ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ 25 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಡಿಸೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. 

ಯುಪಿಯ ಲೋಕ್ ಭವನ್​​ನಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮೋದಿ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ತದನಂತರ ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲದೆ ವಾಜಪೇಯಿ ಮೆಡಿಕಲ್ ಯೂನಿವರ್ಸಿಟಿಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಯಪಿ ಸಿಎಂ ಯೋಗಿ ಅದಿತ್ಯನಾಥ್ , ರಾಜ್ಯಪಾಲ ಆನಂದಿ ಬೆನ್ ಪಟೇಲ್ ಮತ್ತಿತರರು ಪಾಲ್ಗೊಳಲಿದ್ದಾರೆ. 

- Advertisment -

Most Popular

Recent Comments