Friday, October 7, 2022
Powertv Logo
Homeರಾಜ್ಯವಿಚಾರಣಾ ಕೈದಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

ವಿಚಾರಣಾ ಕೈದಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಬ್ಲೇಡಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ರಾಜನ್ 50 ಆತ್ಮಹತ್ಯೆಗೆ ಯತ್ನಿಸಿರುವ ವಿಚಾರಣಾಧೀನ ಕೈದಿ ಯಾಗಿದ್ದು ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಎಂದಿನಂತೆ ಮುಂಜಾನೆ ಶೌಚಾಲಯಕ್ಕೆ ಹೋದಾಗ ಬ್ಲೇಡಿನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವೇಳೆ ಜೈಲು ಸಿಬ್ಬಂದಿಗಳು ನೋಡಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.

ಪ್ರತಿ ಭಾನುವಾರ ಕೈದಿಗಳಿಗೆ ಜೈಲಿನಲ್ಲಿ ತಮ್ಮ ಉಗುರುಗಳನ್ನು ಕತ್ತರಿಸಲು ಬ್ಲೇಡ್ ಹಾಗೂ ನೈಲ್ ಕಟ್ಟರ್ ನೀಡುತ್ತಾರೆ. ಬ್ಲೇಡ್ ನೀಡಿದ ಸಂದರ್ಭದಲ್ಲಿ ಈ ರೀತಿಯಾಗಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಯಾವ ಕಾರಣಕ್ಕಾಗಿ ಈ ರೀತಿಯಾಗಿ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬುದು ತಿಳಿದುಬಂದಿಲ್ಲ. ಸದ್ಯ ಜಿಲ್ಲಾ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಬಸವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಪ್ರಕರಣ ಕೂಡ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

4 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments