Home uncategorized ಸುಮಾರು 5 ಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ಆಯುರ್ವೇದ ಬೂಸ್ಟರ್ ಕಿಟ್ - ಸಚಿವ ಕೆ. ಎಸ್...

ಸುಮಾರು 5 ಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ಆಯುರ್ವೇದ ಬೂಸ್ಟರ್ ಕಿಟ್ – ಸಚಿವ ಕೆ. ಎಸ್ ಈಶ್ವರಪ್ಪ

ಶಿವಮೊಗ್ಗ : ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕು ಪೀಡಿತರು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲೀಗ, ಖುದ್ದು ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನಗರದ ನಾಗರೀಕರಿಗೆ ಆಯುರ್ವೇದ ಬೂಸ್ಟರ್ ಕಿಟ್ ನೀಡಲು ನಿರ್ಧರಿಸಿದ್ದಾರೆ. ಇದನ್ನು ಸರ್ಕಾರದಿಂದ ನೀಡದೇ, ಖಾಸಗಿ ಟ್ರಸ್ಟ್ ವೊಂದನ್ನು ಸ್ಥಾಪಿಸಿ ನೀಡಲು ನಿರ್ಧರಿಸಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ಕಿಟ್ ಗಳನ್ನು ತರಿಸಿಕೊಳ್ಳಲು ಯೋಜಿಸಿದ್ದಾರೆ. ಈಗಾಗಲೆ, 1 ಲಕ್ಷ ಕಿಟ್ ತರಿಸಿದ್ದು, ಮೊದಲ ಹಂತವಾಗಿ, ಅಗತ್ಯ ಇರುವವರಿಗೆ ನೀಡಲು ನಿರ್ಧರಿಸಿದ್ದಾರೆ. ಅಂದರೆ, ಮನೆಯಲ್ಲಿ ವಯಸ್ಸಾದವರು ಹೆಚ್ಚಿರುವ ಮನೆಗಳಿಗೆ ನೀಡಲು, ನಿರ್ಧಾರ ಮಾಡಿದ್ದಾರೆ. ಈ ಸಂಬಂಧ ನಿನ್ನೆ ರಾತ್ರಿ, ವಿವಿಧ ಉದ್ಯಮಿಗಳು ಮತ್ತು ವೈದ್ಯರೊಂದಿಗೆ ಸಮಾಲೋಚನೆ ನಡೆಸಿರುವ ಅವರು, ಈ ಆಯುರ್ವೇದದ ಬೂಸ್ಟರ್ ಕಿಟ್ ಮೂಲಕ ನಗರದ ನಾಗರೀಕರಿಗೆ ಈ ಸಂಕಷ್ಟದ ಸಮಯದಲ್ಲಿ ನೆರವಾಗಲು ನಿಂತಿದ್ದಾರೆ. ಸಮಾಜದ ಋಣ ತೀರಿಸುವ ಸಂದರ್ಭ ಇದಾಗಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಜನರ ಪರವಾಗಿ ನಾವು ನಿಲ್ಲಬೇಕೆಂದು ತೀರ್ಮಾನಿಸಿಕೊಂಡಿರುವ ಸಚಿವ ಈಶ್ವರಪ್ಪ, ಈ ಬೂಸ್ಟರ್ ಕಿಟ್ ಹಂಚಿಕೆಯಲ್ಲಿ ಯಾವುದೇ ಲೋಪವಾಗದಂತೆ, ಪ್ರತಿಯೊಬ್ಬ ವ್ಯಕ್ತಿಗೂ ತಲುಪಬೇಕೆಂದು ಯೋಜಿಸಿದ್ದಾರೆ. ಕೊರೋನಾ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಉದ್ಯಮಿಗಳ ನೆರವಿನ ಮೂಲಕ ಸುಮಾರು 5 ಲಕ್ಷಕ್ಕೂ ಹೆಚ್ಚು ನಾಗರೀಕರಿಗೆ ಈ ಬೂಸ್ಟರ್ ಕಿಟ್ ನೀಡಲು ಇದೀಗ ಸಚಿವ ಕೆ.ಎಸ್. ಈಶ್ವರಪ್ಪ ನಿರ್ಧಾರ ಮಾಡಿದ್ದು, ಇದು ಮಾದರಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments