Home ರಾಜ್ಯ ಬೆಂಗಳೂರು ಮಹಿಳೆಯರ ಸುರಕ್ಷತೆಗಾಗಿ 'ಸುರಕ್ಷಾ' ಆ್ಯಪ್..!

ಮಹಿಳೆಯರ ಸುರಕ್ಷತೆಗಾಗಿ ‘ಸುರಕ್ಷಾ’ ಆ್ಯಪ್..!

ಬೆಂಗಳೂರು :  ತೆಲಂಗಾಣದಲ್ಲಿ ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ‘ಹತ್ಯಾಚಾರ’ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸರು ಮಹಿಳೆಯರ ಸುರಕ್ಷತೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಮಹಿಳೆಯರ ಸುರಕ್ಷತೆಗಾಗಿ `ಸುರಕ್ಷಾ ಆ್ಯಪ್​​’ ಅನ್ನು ಪರಿಚಯಿಸಲಾಗಿದೆ. ಪೊಲೀಸ್ ಕಮಿಷನರ್ ಭಾಸ್ಕರ್​ ಇಂದು ಈ ಆ್ಯಪನ್ನು ಬಿಡುಗಡೆ ಮಾಡಿದ್ದಾರೆ. 

`ಸುರಕ್ಷಾ ಆ್ಯಪ್​​’  ಮೂಲಕ  ಕೇವಲ7 ಸೆಕೆಂಡುಗಳಲ್ಲಿ  ಪೊಲೀಸರಿಗೆ ಮಾಹಿತಿ ರವಾನೆಯಾಗಲಿದ್ದು, ತಕ್ಷಣವೇ ಹೊಯ್ಸಳ ಪೊಲೀಸರು ಸ್ಥಳಕ್ಕೆ ಬರುತ್ತಾರೆ ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.

ಮಹಿಳೆಯರ ರಕ್ಷಣೆಗೆ ಸುರಕ್ಷಾ ಆ್ಯಪ್ ಬಂದಿದ್ದು, ಪೊಲೀಸರಿಗೆ  ನೀವು ಜನರ ನಂಬಿಕೆ ಕಳೆದುಕೊಳ್ಳಬೇಡಿ. ಜನರಿಗೆ  ಪೊಲೀಸರು ಇದ್ದಾರೆಂಬ ಧೈರ್ಯವಿರಲಿ. ಕರೆ ಬಂದ ಬಳಿಕ ಅದರ ಕನ್ಗಿಫರ್ಮೇಷನ್ನಿಗೆ ಕಾಯ್ದು ಕೂರದೇ  ಯಾವುದೇ ತುರ್ತು ಕರೆ ಬಂದ ಕೂಡಲೇ ಅದಕ್ಕೆ ಸ್ಪಂದಿಸಿ ಎಂದಿದ್ದಾರೆ.

 ಅಷ್ಟೇ ಅಲ್ಲ ಪೊಲೀಸ್ ಇಲಾಖೆಯ ಪ್ರತಿಯೊಂದು ಸೇವೆಗಳೂ ಜನರಿಗೆ ಲಭ್ಯವಾಗಬೇಕು. ವಿಶೇಷವಾಗಿ ಮಹಿಳೆಯರ ಸುರಕ್ಷತೆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಗಾರ್ಮೆಂಟ್, ಶಾಲೆ-ಕಾಲೇಜುಗಳು, ಐಟಿ ಕಂಪನಿಗಳ ಬಳಿಯಿಂದ ಯಾವುದೇ ಕರೆಗಳು ಬಂದರೆ ತಕ್ಷಣ ಸ್ಪಂದಿಸಬೇಕು. ವ್ಯಾಪ್ತಿ ನೋಡಿ ಕೆಲಸ ಮಾಡದೆ, ದೂರು ಬಂದಾಗ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಕಾದು ಕೂರಬೇಡಿ. ಠಾಣೆಯಲ್ಲಿ ಅಧಿಕಾರಿಗಳಿಗಾಗಿ ಕಾಯದೇ ತಕ್ಷಣ ಕ್ರಮ ಕೈಗೊಂಡು ದೂರು ದಾಖಲಿಸಿ. ಸಂಬಂಧಪಟ್ಟ ಠಾಣೆಗೆ ಸಂದೇಶ ನೀಡಿ. ಬೇಜವಾಬ್ಧಾರಿ ತೋರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Recent Comments