Home ರಾಜ್ಯ ಹೊರ ರಾಜ್ಯದಿಂದ ಬಂದವರಿಗೆ ಇನ್ಮುಂದೆ ಹೋಂ ಕ್ವಾರಂಟೈನ್..! 

ಹೊರ ರಾಜ್ಯದಿಂದ ಬಂದವರಿಗೆ ಇನ್ಮುಂದೆ ಹೋಂ ಕ್ವಾರಂಟೈನ್..! 

ಬೆಂಗಳೂರು : ಇಷ್ಟು ದಿನ ಬೇರೆ ರಾಜ್ಯದಿಂದ ಬಂದವರಿಗೆ ಕಡ್ಡಾಯವಾಗಿ ಹೋಟೆಲ್ ಕ್ವಾರಂಟೈನ್ ಮಾಡಲಾಗುತ್ತಿತ್ತು.  ಆದ್ರೆ ಇಂದಿನಿಂದ ಮಹಾರಾಷ್ಟ್ರದಿಂದ ಬಂದವರನ್ನ  ಹೊರತುಪಡಿಸಿ ಬೇರೆ ರಾಜ್ಯಗಳಿಂದ ಬಂದವರಿಗೆ ಹೋಟೆಲ್ ಕ್ವಾರಂಟೈನ್ ಅವಶ್ಯಕತೆ ಇಲ್ಲ, ಮನೆಯಲ್ಲಿಯೇ ಹೋಂ ಕ್ವಾರಂಟೈನ್ ನಲ್ಲಿ ಇರಬಹುದು ಎಂದು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ರಾಜ್ಯ ಸರ್ಕಾರ ಇಂದಿನಿಂದ ಲಾಕ್ ಡೌನ್ ಸಂಪೂರ್ಣವಾಗಿ ಸಡಿಲಿಕೆ ಮಾಡಿದೆ. ಇಷ್ಟು ದಿನ ಅಂತಾರಾಜ್ಯದಿಂದ ಬಂದವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುತ್ತಿತ್ತು.  ಆದ್ರೆ ಇನ್ನು ಮುಂದೆ  ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯಗಳಾದ ದೆಹಲಿ, ಮದ್ಯಪ್ರದೇಶ, ಮತ್ತಿತರ ರಾಜ್ಯಗಳಿಂದ ಬಂದವರಿಗೆ ಹೋಟೇಲ್ ಕ್ವಾರಂಟೈನ್ ಅವಶ್ಯಕತೆ ಇರುವುದಿಲ್ಲ,  ಹೋಂ ಕ್ವಾರಂಟೈನ್ ನಲ್ಲಿ ಇರಲು ಆದೇಶಿಸಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಪಾಸಿಟೀವ್ ಪ್ರಕರಣಗಳು ಇರುವುದರಿಂದ ಮಹಾರಾಷ್ಟ್ರದಿಂದ ಬಂದವರಿಗೆ ಕಡ್ಡಾಯವಾಗಿ 14 ದಿನ ಹೋಟೇಲ್ ಕ್ವಾರಂಟೈನ್ ಸೂಚಿಸಿದೆ. ಇನ್ನು  ಯಾರೆಲ್ಲ ಕಡಿಮೆ ವಿಸ್ತೀರ್ಣದ ಮನೆ, ಕೊಳಗೇರಿಯಲ್ಲಿ ವಾಸವಿದ್ದಾರೋ ಅಂತವರು ಸಹಾ ಹೋಟೇಲ್ ಕ್ವಾರಂಟೈನ್ ನಲ್ಲಿರುವುದು ಕಡ್ಡಾಯವಾಗಿದೆ. 

ಹಾಗೆ ಬೇರೆ ರಾಜ್ಯಗಳಿಂದ ಬಂದವರಿಗೆ ಹೋಂ ಕ್ವಾರಂಟೈನ್ ಕಡ್ಡಾಯ, ಮತ್ತು ಪ್ರತಿಯೊಬ್ಬರಿಗೂ ಸೀಲ್ ಹಾಗಬೇಕು. 14 ದಿನಗಳವರೆಗೂ ಯಾರೂ ಕೂಡ ಮನೆಯಿಂದ ಹೊರ ಬರುವಂತಿಲ್ಲ ಯಾರಾದರು ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ಧ FIR ದಾಖಲಿಸುವುದಾಗಿ ರಾಜ್ಯಸರ್ಕಾರ ತೀರ್ಮಾನಿಸಿದೆ. 

 

LEAVE A REPLY

Please enter your comment!
Please enter your name here

- Advertisment -

Most Popular

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

Recent Comments