Home ರಾಜ್ಯ  ಸಾವು - ಬದುಕಿನ ಹೋರಾಡುತ್ತಿದ್ದ ಕಾಡೆಮ್ಮೆಯ ರಕ್ಷಣೆ

 ಸಾವು – ಬದುಕಿನ ಹೋರಾಡುತ್ತಿದ್ದ ಕಾಡೆಮ್ಮೆಯ ರಕ್ಷಣೆ

ಬನ್ನೇರುಘಟ್ಟ: ಕೋಡಿಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಗಾಯಗೊಂಡಿದ್ದ ಕಾಡೆಮ್ಮೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಿದ್ದಾರೆ. ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. 

ಕಳೆದ ಮೂರು ದಿನಗಳ‌ ಹಿಂದೆ ಕಾಡಂಚಿನ ಗ್ರಾಮವಾದ ಕೋಡಿಹಳ್ಳಿ ಸಮೀಪದ ಕೇರಳಾಲಸಂದ್ರದಲ್ಲಿ ಒಂದುವರೆ ವರ್ಷದ ಕಾಡೆಮ್ಮೆಯೊಂದು ಕಾಲಿಗೆ ಗಾಯ ಮಾಡಿಕೊಂಡು ನರಳಾಡುತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಮುಟ್ಟಿಸಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ವೈದ್ಯರ ಹಾಗೂ ಸಿಬ್ಬಂದಿಯ ಸಹಾಯ ಪಡೆದು ಉದ್ಯಾನವನದ ಆಸ್ಪತ್ರೆಗೆ ಕರೆತಂದಿದ್ದರು.

ಕಾಡೆಮ್ಮೆಯ ಬಲಗಾಲು ಮುರಿದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕಾಡೆಮ್ಮೆಗೆ ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನ ಉಪನ್ಯಾಸಕ ನಾಗರಾಜು, ನಿವೃತ್ತ ರೀಡರ್ ಡಾಕ್ಟರ್ ವಸಂತ್ ಶೆಟ್ಟಿ, ಮತ್ತು ಉದ್ಯಾನವನದ ಡಾಕ್ಟರ್ ಉಮಶಂಕರ್ ನೇತೃತ್ವದ ತಂಡ ಶಸ್ತ್ರಚಿಕಿತ್ಸೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು,ಸದ್ಯ ಚೇತರಿಸಿಕೊಳ್ಳುತ್ತಿದೆ ಎಂದು‌ ಉದ್ಯಾನವನದ ಡಾ.ಉಮಾಶಂಕರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಡ್ರಗ್ ಜಾಲದ ಹಿಂದೆ ದೊಡ್ಡ ದೊಡ್ಡ ಕುಳಗಳಿವೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಡ್ರಗ್ಸ್ ಜಾಲದ ಹಿಂದೆ ದೊಡ್ಡ ಕುಳಗಳಿವೆ ಎಂದು ಇಂದ್ರಜಿತ್ ಲಂಕೇಶ್ ಕಮೀಷನರ್ ಕಚೇರಿ ಬಳಿ ಹೇಳಿದ್ದಾರೆ. ಡ್ರಗ್ಸ್ ಜಾಲದಲ್ಲಿ ಸಣ್ಣ ಸಣ್ಣ ಮೀನು ಹಿಡಿದಿದ್ದಾರೆ. ಡೊಡ್ಡವರನ್ನು ಹಿಡಿಯಬೇಕು ಎಂದಿದ್ದಾರೆ. ಡಿಸಿಪಿ ಬಸವರಾಜ್ ಅಂಗಡಿ...

‘ಶಾಲಾ ಶುಲ್ಕದ ವಿಚಾರವಾಗಿ ಸರ್ಕಾರಕ್ಕೆ ಡೆಡ್‌ ಲೈನ್ ಕೊಟ್ಟ ಪೋಷಕರು’

ಬೆಂಗಳೂರು: ಖಾಸಗಿ ಶಾಲಾ ಶುಲ್ಕದ ಟಾರ್ಚರ್ ಹಿನ್ನಲೆಯಲ್ಲಿ ಶುಲ್ಕದ ವಿಚಾರವಾಗಿ ಪೋಷಕರು ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿದ್ದಾರೆ. ಶಾಲಾ ಶುಲ್ಕದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಈ ಹಿಂದೆ ಮೂರು ಭಾರಿ...

‘ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ’

ರಾಯಬಾಗ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ನಡೆದಿದೆ.  ಬೆಳಗಾವಿ ಜಿಲ್ಲೆ ರಾಯಬಾಗ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದ್ದು,  ವೃದ್ಧ ತಂದೆ, ತಾಯಿ,...

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

Recent Comments