Home ಪವರ್ ಪಾಲಿಟಿಕ್ಸ್ 'ವಿಧಾನ ಪರಿಷತ ಗಲಾಟೆ, ರಾಜ್ಯದ ಜನರ ಕ್ಷಮೆಯಾಚಿಸಿದ್ದೇನೆ': ಬಸವರಾಜ ಹೊರಟ್ಟಿ

‘ವಿಧಾನ ಪರಿಷತ ಗಲಾಟೆ, ರಾಜ್ಯದ ಜನರ ಕ್ಷಮೆಯಾಚಿಸಿದ್ದೇನೆ’: ಬಸವರಾಜ ಹೊರಟ್ಟಿ

ಧಾರವಾಡ : ವಿಧಾನ ಪರಿಷತನ ಸಭಾಪತಿ ವಿಚಾರದಲ್ಲಿ ಅವಿಶ್ವಾಸ ಮಂಡನೆ ವೇಳೆ ನಡೆದ ಗಲಾಟೆಗೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕ್ಷಮೆಯಾಚಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು ನನ್ನ ಜೀವಮಾನದಲ್ಲಿಯೇ ಇಂತಹ ಘಟನೆ ನೋಡಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಸುಧೀರ್ಘ ರಾಜಕೀಯ ಜೀವನದಲ್ಲಿ ಇಷ್ಟೊಂದು ನಾಚಿಕೆಯಾಗಿರಲಿಲ್ಲ ಎಂದ ಹೊರಟ್ಟಿ,  ಘಟನೆ ನೋಡಿ ಅತ್ತಿದ್ದೇನೆ ಎಂದರು. ದೇಶದಲ್ಲಿಯೇ ಅತ್ಯಂತ ಗೌರವ ಪಡೆದಿದ್ದ ಕರ್ನಾಟಕದ ವಿಧಾನ ಪರಿಷತನಲ್ಲಿ ನಡೆದ ಘಟನೆ ನೋವು ತಂದಿದೆ. ಗಲಾಟೆ ಮಾಡಿದವರ ಮೇಲೆ ನಿರ್ಧಾಕ್ಷಿಣ ಕ್ರಮ ಕೈಗೊಳ್ಳುವಂತೆ  ಆಗ್ರಹ ಮಾಡಿದ್ದೆವೆ  ಎಂದರು. ಇನ್ನು ವಿಧ್ಯಾಗಮ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಬಸವರಾಜ ಹೊರಟ್ಟಿ, ಶಿಕ್ಷಕರು ಮನೆ ಮನೆಗೆ ಹೋಗಿ ಪಾಠ ಮಾಡುವ ಬದಲು ಶಾಲೆಯಲ್ಲಿಯೇ 10 ವಿಧ್ಯಾರ್ಥಿಗಳಿಗೆ ಒಂದು ಬ್ಯಾಚ್ ನಂತೆ ಪಾಠ ಮಾಡಲು ಅವಕಾಶ ಕೊಡಲಿ ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments