ಮೈಸೂರು: ಲಾಕ್ಡೌನ್ ಬಳಿಕ ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯಲಾಗದೇ ಬೆಳೆಗಳನ್ನು ನಾಶ ಮಾಡುತ್ತಿದ್ದಾರೆ. ಹಾಗಾಗಿ ರೈತರು ಬೆಳೆ ನಾಶ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ‘ಲಾಕ್ಡೌನ್ನಿಂದ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ರೈತರು ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಕೊಂಡೊಯ್ಯಲು ಯಾವುದೇ ರೀತಿಯಲ್ಲಿ ಅಡ್ಡಿಯಾಗುವುದಿಲ್ಲ. ಬೀಜ, ಬಿತ್ತನೆ ಹಾಗೂ ರಸಗೊಬ್ಬರಗಳನ್ನು ಖರೀದಿಸಬಹುದು. ಅಂಗಡಿ ಮಾಲೀಕರು ಹಸಿರು ಪಾಸ್ಗಳನ್ನು ಪಡೆದು ಬೀಜ, ರಸಗೊಬ್ಬರಗಳನ್ನು ಮಾರಾಟ ಮಾಡಬಹುದು‘ ಎಂದು ಹೇಳಿದ್ದಾರೆ.
ಕೇರಳದಿಂದ ವೈರಸ್ ಹರಡುವ ಆತಂಕವಿರುವುದರಿಂದ ಮೈಸೂರು ಸುತ್ತಮುತ್ತ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದ್ದು, ಮೈಸೂರಿನಿಂದ ತರಕಾರಿ ಕೇರಳಕ್ಕೆ ಹೋಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಹಾಗಂತ ನೀವು ಬೆಳೆದ ಬೆಳೆಗಳನ್ನು ನಾಶ ಮಾಡಬೇಡಿ ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.
ತರಕಾರಿಗಳನ್ನು ಇಡಲು ಹೊಸ ಕೋಲ್ಡ್ ಸ್ಟೋರೇಜ್ಗಳನ್ನು ನಿರ್ಮಿಸುವುದು ಕಷ್ಟ ಸಾಧ್ಯ. ರಾಜ್ಯದಲ್ಲಿ ಈಗಾಗಲೇ ಒಟ್ಟು 13 ಕೋಲ್ಡ್ ಸ್ಟೋರೇಜ್ಗಳಿವೆ ಎಂದು ಹೇಳಿದ್ದಾರೆ.