Sunday, May 29, 2022
Powertv Logo
Homeರಾಜ್ಯರೈತರ ಸಮಸ್ಯೆ ಪರಿಶೀಲನೆಗೆ ಜಿಲ್ಲಾ ಪ್ರವಾಸ ಕೈಗೊಂಡ ಬಿ.ಸಿ ಪಾಟೀಲ್ 

ರೈತರ ಸಮಸ್ಯೆ ಪರಿಶೀಲನೆಗೆ ಜಿಲ್ಲಾ ಪ್ರವಾಸ ಕೈಗೊಂಡ ಬಿ.ಸಿ ಪಾಟೀಲ್ 

ಬೆಂಗಳೂರು: ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಲಾಕ್​ಡೌನ್ ಆದೇಶವನ್ನು ಹೊರಡಿಸಲಾಗಿತ್ತು. ಆದರೆ ಇದರಿಂದ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೀಗ ಅವರ ಸಮಸ್ಯೆಗಳನ್ನು ಪರಿಶೀಲಿಸಲು ಕೃಷಿ ಸಚಿವ ಬಿ.ಸಿ ಪಾಟೀಲ್ ಜಿಲ್ಲಾ ಪ್ರವಾಸ  ಕೈಗೊಂಡಿದ್ದಾರೆ.

ಲಾಕ್​ಡೌನ್ ಹಿನ್ನೆಲೆ ರೈತರು ಎದುರಿಸುತ್ತಿರುವ ಸಮಸ್ಯೆಗಳೇನು? ಅವರ ಸ್ಥಿತಿಗತಿಗಳು ಹೇಗಿದೆ? ಹಾಗೆಯೇ ಜಿಲ್ಲೆಗಳ ಕೃಷಿ ಇಲಾಖೆಯಲ್ಲಿ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಬೇಕು. ಅದಕ್ಕಾಗಿ ಬಿ.ಸಿ ಪಾಟೀಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಇಂದಿನಿಂದ ಏಪ್ರಿಲ್ 11ರವರೆಗೆ ಅವರು ಪ್ರವಾಸ ಮಾಡಲಿದ್ದಾರೆ. ಇಂದು ಬೆಳಗಾವಿ, ಬಾಗಲಕೋಟೆ, ಧಾರವಾಡ ಹಾಗೂ ನಾಳೆ ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

Recent Comments