Home P.Cricket ಐಪಿಎಲ್ IPLನಲ್ಲಿ VIVO ಪ್ರಾಯೋಜಕತ್ವ ರದ್ದು

IPLನಲ್ಲಿ VIVO ಪ್ರಾಯೋಜಕತ್ವ ರದ್ದು

ನವದೆಹಲಿ :  IPL 2020ಗೆ ಇನ್ನು ಕೇವಲ 44 ದಿನ ಮಾತ್ರ ಬಾಕಿ ಇದೆ. ಯುಎಇನಲ್ಲಿ ಸೆಪ್ಟೆಂಬರ್ 19ರಿಂದ IPL ಹಬ್ಬ ಆರಂಭವಾಗಲಿದೆ. ಈ ನಡುವೆ ಬಿಸಿಸಿಐ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವ ಹೊಂದಿದ್ದ ಚೀನಾದ VIVO ಕಂಪನಿಯೊಂದಿಗಿನ ಒಪ್ಪಂದವನ್ನು ರದ್ದುಮಾಡಿಕೊಂಡಿದೆ.

IPL ಶೀರ್ಷಿಕೆ ಪ್ರಾಯೋಜಕತ್ವವನ್ನು VIVO ಮುಂದುವರೆಸುವುದನ್ನು ವಿರೋಧಿಸಿ ಕ್ರಿಕೆಟ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಐಪಿಎಲ್​ ಬಹಿಷ್ಕಾರ ಅಭಿಯಾನ ಶುರುಮಾಡಿದ್ದರು. ಹೀಗೆ ವಿವೋ ಪ್ರಾಯೋಜಕತ್ವಕ್ಕೆ ತೀರಾ ವಿರೋಧ ಕಂಡುಬಂದಿದ್ದರಿಂದ ಬಿಸಿಸಿಐ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ವಿವೋ ಪ್ರಾಯೋಜಕತ್ವವನ್ನು ರದ್ದು ಮಾಡಿದೆ.

ಅಭಿಮಾನಿಗಳ ಭಾವನೆ ಮಂಡಳಿಗೆ ಮೊದಲ ಆದ್ಯತೆ ಹಾಗೂ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಾಗುತ್ತದೆ. ಹಾಗಾಗಿ ವಿವೋ ಪ್ರಾಯೋಜಕತ್ವವನ್ನು ರದ್ದುಗೊಳಿಸಿರುವುದಾಗಿ ಬಿಸಿಸಿಐ ತಿಳಿಸಿದೆ.

ವಿವೋ ಐಪಿಎಲ್ ಪ್ರಾಯೋಜಕತ್ವ ಶೀರ್ಷಿಕೆ ಪಡೆದು ಬಿಸಿಸಿಐನೊಂದಿಗೆ 5 ವರ್ಷಗಳಿಗೆ 2,199 ಕೋಟಿ ರೂ ಒಪ್ಪಂದ ಮಾಡಿಕೊಂಡಿತ್ತು. ಈಗ ಎರಡು ವರ್ಷಗಳ ಒಪ್ಪಂದ ಮುಗಿದಿದೆ. ಈ ಬಾರಿ ಬಿಸಿಸಿಐ ವಿವೋ ಪ್ರಾಯೋಜಕತ್ವ ಬೇಡ ಅಂದಿದ್ದು ಬಾಕಿ ಇರುವ 1,320 ಕೋಟಿ ರೂಗಳ ಒಪ್ಪಂದಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಸ್ಪಷ್ಟನೆ ಸಿಗಲಿದೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments